ರಾಜ್ಯರೈತರ 'ದೆಹಲಿ ಚಲೋ' ಪ್ರತಿಭಟನೆಗೆ ಬೆಂಬಲ; ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ
ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಹಾಗೂ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಹೊಸಪೇಟೆ-ಬಳ್ಳಾರಿ ಹೆದ್ದಾರಿಯಲ್ಲಿ ರಸ್ತೆತಡೆದು ಬುಧವಾರ ಪ್ರತಿಭಟನೆ ನಡೆಸಿದರು.