ಹ್ಯಾಕಿಂಗ್
ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ
ಆರೋಪಿಗಳು ಬಿಹಾರದಿಂದಲೇ 4-5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ಭಾರತದ ಪ್ರಮುಖ ಸ್ಥಳಗಳ ಮೇಲೆ ಪಾಕಿಸ್ತಾನ ಹ್ಯಾಕರ್ ಗಳಿಂದ 15 ಲಕ್ಷ ಸೈಬರ್ ದಾಳಿ!
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮಧ್ಯಪ್ರಾಚ್ಯ ಪ್ರದೇಶದಿಂದ ಈ ದಾಳಿಗಳು ನಡೆದಿರುವುದರಿಂದ 15 ಲಕ್ಷ ಸೈಬರ್ ದಾಳಿ ಪ್ರಯತ್ನಗಳಲ್ಲಿ ಕೇವಲ 150 ಮಾತ್ರ ಯಶಸ್ವಿಯಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನನ್ನ ಮೊಬೈಲ್, ವಾಟ್ಸಪ್ ಹ್ಯಾಕ್ ಮಾಡಲಾಗಿದೆ: Supriya Sule
‘ನನ್ನ ಮೊಬೈಲ್, ವ್ಯಾಟ್ಸ್‌ಆ್ಯಪ್ ಹ್ಯಾಕ್ ಮಾಡಲಾಗಿದೆ. ದಯವಿಟ್ಟು ಯಾರು ನನಗೆ ಕರೆ ಮಾಡಬೇಡಿ ಅಥವಾ ಸಂದೇಶ ಕಳುಹಿಸಬೇಡಿ ಎಂದು ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕೇಂದ್ರದಿಂದ ಸರ್ವರ್ ಹ್ಯಾಕ್ ಹೇಳಿಕೆ: ಜಾರಕಿಹೊಳಿ ವಿರುದ್ಧ ಕ್ರಮಕ್ಕೆ ಯತ್ನಾಳ್ ಆಗ್ರಹ
ರಾಜ್ಯದ ಯೋಜನೆಗಳಿಗೆ ಅಡ್ಡಿಯುಂಟು ಮಾಡಲು ಕೇಂದ್ರ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಆ್ಯಪ್'ನ್ನು ಹ್ಯಾಕ್ ಮಾಡಿದೆ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣ: ಸ್ಟಾನ್ ಸ್ವಾಮಿ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸಾಕ್ಷ್ಯಾಧಾರ ಇರಿಸಲಾಗಿತ್ತು: ಅಮೆರಿಕದ ಫೋರೆನ್ಸಿಕ್ ಸಂಸ್ಥೆ ವರದಿ
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ಅವರನ್ನು ಅನವಶ್ಯಕವಾಗಿ ಬಂಧಿಸಲಾಗಿದ್ದು, ಉದ್ದೇಶಪೂರ್ವಕವಾಗಿಯೇ ಅವರ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸಾಕ್ಷ್ಯಾಧಾರಗಳನ್ನು ಇರಿಸಲಾಗಿತ್ತು ಎಂದು ಅಮೆರಿಕ ಮೂಲದ ಫೋರೆನ್ಸಿಕ್ ಸಂಸ್ಥೆ ವಾದಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ಕೇರಳ ರಾಜ್ಯಪಾಲರ ಫೇಸ್ ಬುಕ್ ಖಾತೆ ಹ್ಯಾಕ್!
ಕೇರಳ ರಾಜ್ಯಪಾಲರ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದ್ದು, ಈ ಬಗ್ಗೆ ಸ್ವತಃ ಅವರೇ ಶನಿವಾರ ಮಾಹಿತಿ ನೀಡಿದ್ದಾರೆ.

ವಿಶ್ವದ ಅತಿದೊಡ್ಡ ಕ್ರಿಪ್ಟೋ ಕರೆನ್ಸಿ ವಿನಿಮಯ ಸಂಸ್ಥೆ Binance ಹ್ಯಾಕ್; 100 ಮಿಲಿಯನ್ ಡಾಲರ್ ಗಿಂತ ಹೆಚ್ಚಿನ ಮೊತ್ತ ನಷ್ಟ!
ವಿಶ್ವದ ಅತಿದೊಡ್ಡ ಕ್ರಿಪ್ಟೋಕರೆನ್ಸಿ ವಿನಿಮಯ ಸಂಸ್ಥೆ Binance ಅನ್ನು ಹ್ಯಾಕ್ ಮಾಡಲಾಗಿದ್ದು, ಇದರಿಂದ ಸುಮಾರು 100 ಮಿಲಿಯನ್ ಡಾಲರ್ ಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಬಿಟ್‌ಕಾಯಿನ್ ಹಗರಣ: ವಾರಾಂತ್ಯದಲ್ಲಿ ಸಿಐಡಿಯಿಂದ ಚಾರ್ಜ್'ಶೀಟ್ ಸಲ್ಲಿಕೆ ಸಾಧ್ಯತೆ
ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಸೆಲ್‌ನಿಂದ 11.5 ಕೋಟಿ ಹಣವನ್ನು ಹ್ಯಾಕ್ ಮಾಡಿ ಕಬಳಿಸಿದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರರ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ)ದ ಅಧಿಕಾರಿಗಳು ಈ ವಾರಾಂತ್ಯದೊಳಗೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ, ಕೋವಿನ್ ಪೋರ್ಟಲ್ ಹ್ಯಾಕ್ ಆಗಿಲ್ಲ: ಕೇಂದ್ರ ಸರ್ಕಾರ
ಕೋವಿಡ್-19 ಲಸಿಕೆಗಾಗಿ ನೋಂದಣಿ ಪ್ರಕ್ರಿಯೆ ನಡೆಯುವ ಕೋವಿನ್ ಪೋರ್ಟಲ್ ಹ್ಯಾಕ್ ಆಗಿದೆ ಎಂಬ ಮಾಧ್ಯಮ ವರದಿಗಳಿನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

