Watch | ರಕ್ತ ಹರಿಯುವುದಾದರೆ, ಅವರ ಕಡೆಯಲ್ಲೇ ಹೆಚ್ಚು ಹರಿಯಬಹುದು...: Shashi Tharoor
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ನಾಗರಿಕರ ಹತ್ಯೆ ನಂತರ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ.
ಈ ಬಗ್ಗೆ, ಕಾಂಗ್ರೆಸ್ ಸಂಸದ ಶಶಿ ತರೂರ್ ಸ್ಪಷ್ಟ ಮಿಲಿಟರಿ ಪ್ರತಿಕ್ರಿಯೆ ಅನಿವಾರ್ಯ ಎಂದು ಹೇಳಿದ್ದಾರೆ.
ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ಬಗ್ಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬಿಲಾವಲ್ ಭುಟ್ಟೋ-ಜರ್ದಾರಿ ಅವರ "ರಕ್ತ ಹರಿಯುತ್ತದೆ" ಎಂಬ ಹೇಳಿಕೆಗೆ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ.
"ಇದು ಕೇವಲ ಉದ್ರೇಕಕಾರಿ ಮಾತು. ಪಾಕಿಸ್ತಾನಿಗಳು ಭಾರತೀಯರನ್ನು ಶಿಕ್ಷೆಯಿಲ್ಲದೆ ಕೊಲ್ಲಲು ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು.
ನಾವು ಪಾಕಿಸ್ತಾನಿಗಳಿಗೆ ಏನನ್ನೂ ಮಾಡಲು ಬಯಸುವುದಿಲ್ಲ. ಆದರೆ ಅವರು ನಮಗೆ ಏನಾದರೂ ಮಾಡಿದರೆ, ಪ್ರತಿಕ್ರಿಯೆಗೆ ಸಿದ್ಧರಾಗಿರಿ.
ರಕ್ತ ಹರಿಯುವುದಾದರೆ, ಅದು ನಮ್ಮದಕ್ಕಿಂತ ಅವರ ಕಡೆಯಿಂದ ಹೆಚ್ಚು ಹರಿಯಬಹುದು" ಎಂದು ತರೂರ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

