Watch | ಗೊಂಬೆಯಾಟ ಕಲಾವಿದೆ ಭೀಮವ್ವಗೆ ಶಿರಬಾಗಿ ಕೈಮುಗಿದ ಪ್ರಧಾನಿ ಮೋದಿ
ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2025 ರ ಒಟ್ಟು 139 ಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ, 71 ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಿವಿಧ ಕ್ಷೇತ್ರಗಳಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ನಾಲ್ಕು ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 57 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ.
ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಕೊಪ್ಪಳ ಮೂಲದ ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ 96 ವರ್ಷದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು.
ಕನ್ನಡಿಗರಾದ ಕಲಬುರಗಿ ಮೂಲದ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ, ಡಾ. ವಿಜಯಲಕ್ಷ್ಮೀ ದೇಶ್ಮನೆ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

