ವಿಡಿಯೋ

Watch | ಉಕ್ರೇನ್ ಯುದ್ಧದ ಬಗ್ಗೆ ಭಾರತ ತಟಸ್ಥವಾಗಿಲ್ಲ..: ಮೋದಿಗೆ ಪುಟಿನ್ ಹೇಳಿದ್ದು ಹೀಗೆ...

Published On :

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್​ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈ ವೇಳೆ, ಉಕ್ರೇನ್ ಸಂಘರ್ಷವನ್ನು ಉಲ್ಲೇಖಿಸಿ ಮಾತನಾಡಿರುವ ಮೋದಿ, ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ, ಪುಟಿನ್, "ಮೊದಲನೆಯದಾಗಿ, ನನ್ನನ್ನು ಆಹ್ವಾನಿಸಿದ್ದಕ್ಕಾಗಿ ತುಂಬಾ ಧನ್ಯವಾದಗಳು... ಉಕ್ರೇನ್‌ನಲ್ಲಿ ನಡೆಯುತ್ತಿರುವ ಘಟನೆಗಳ ಕುರಿತು ನಾನು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಬಲ್ಲೆ.

ಶಾಂತಿ ಸ್ಥಾಪನೆಗೆ ಸಂಭಾವ್ಯ ಕ್ರಮಗಳ ಕುರಿತು ನಾವು ಯುಎಸ್ ಸೇರಿದಂತೆ ಕೆಲವು ಪಾಲುದಾರರೊಂದಿಗೆ ಒಟ್ಟಾಗಿ ಮಾತನಾಡುತ್ತಿದ್ದೇವೆ. ಈ ಪರಿಸ್ಥಿತಿಗೆ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿ ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.