ವಿಡಿಯೋ

Watch | ಶಾಲಿನಿ ರಜನೀಶ್​ ವಿರುದ್ಧ ಬಿಜೆಪಿ ಎಂಎಲ್‏ಸಿ ಎನ್. ರವಿಕುಮಾರ್ ಆಕ್ಷೇಪಾರ್ಹ ಪದ ಬಳಕೆ, ದೂರು ದಾಖಲು

Published On :

ಕರ್ನಾಟಕದ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಎನ್​ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಅಲ್ಲದೆ, ಮನೋಹರ್ ಅವರು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಗುರುವಾರ ಭೇಟಿ ಮಾಡಿ ಬಿಜೆಪಿ ಎಂಎಲ್‏ಸಿ ರವಿಕುಮಾರ್ ಅವರ ಸದಸ್ಯತ್ವ ರದ್ದುಗೊಳಿಸುವಂತೆ ಮನವಿ ಸಲ್ಲಿಸಿದರು.

ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ರವಿಕುಮಾರ್ ಅವರು, 'ಶಾಲಿನಿ ರಜನೀಶ್ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದ್ದರು' ಎನ್ನಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.