Watch | ಕಾಲೇಜು ವಿದ್ಯಾರ್ಥಿನಿ ಸಾವು: ಒಡಿಶಾ ಸಚಿವಾಲಯ ಹೊರಗೆ ಬೃಹತ್ ಪ್ರತಿಭಟನೆ
ಭುವನೇಶ್ವರದಲ್ಲಿ ಎಫ್ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಖಂಡಿಸಿ ಒಡಿಶಾ ಸೆಕ್ರೆಟರಿಯೇಟ್ ಹೊರಗೆ ಬುಧವಾರ ವಿರೋಧ ಪಕ್ಷ ಬಿಜು ಜನತಾ ದಳ ಬೃಹತ್ ಪ್ರತಿಭಟನೆ ನಡೆಸಿತು.
ಒರಿಸ್ಸಾ ಹೈಕೋರ್ಟ್ನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿರುವ ಬಿಜೆಡಿ, ಬಾಲಸೋರ್ ಪಟ್ಟಣದಲ್ಲಿ ಬಂದ್ ಗೆ ಕರೆ ನೀಡಿದೆ.
ಭುವನೇಶ್ವರದಲ್ಲಿ, ನೂರಾರು ಬಿಜೆಡಿ ಕಾರ್ಯಕರ್ತರು ಮಾಸ್ಟರ್ ಕ್ಯಾಂಟೀನ್ ಚೌಕದಿಂದ ರಾಜ್ಯ ಸೆಕ್ರೆಟರಿಯೇಟ್ ಕಡೆಗೆ ಮೆರವಣಿಗೆ ನಡೆಸಿದರು.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ಗಳು ಮತ್ತು ಜಲ ಫಿರಂಗಿಗಳನ್ನು ಬಳಸಬೇಕಾಯಿತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

