Watch | ಪಾಕ್ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸ್ವಇಚ್ಛೆಯಿಂದ ಮರಳುವ ದಿನ ದೂರವಿಲ್ಲ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಭಾರತದ ಭಾಗವಾಗಿದ್ದು, ಅವರು ಸ್ವಇಚ್ಛೆಯಿಂದ ಭಾರತಕ್ಕೆ ಮರಳುವ ದಿನ ದೂರವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಸಿಐಐ ಬಿಸಿನೆಸ್ ಶೃಂಗಸಭೆಯಲ್ಲಿ ಗುರುವಾರ ಮಾತನಾಡಿರುವ ರಾಜನಾಥ್ ಸಿಂಗ್, ಪಾಕಿಸ್ತಾನದ ಬಗ್ಗೆ ಭಾರತದ ನೀತಿ ವಿಧಾನವನ್ನು ವಿವರಿಸಿದರು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಭಾರತದ ಭಾಗವಾಗಿದ್ದು, ಅವರು ಭಾರತದೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ.
ಭೌಗೋಳಿಕವಾಗಿ ಮತ್ತು ರಾಜಕೀಯವಾಗಿ ಪ್ರತ್ಯೇಕವಾಗಿದ್ದರೂ ಪಿಒಕೆ ಜನರು ಒಂದು ದಿನ ಸ್ವಾಭಿಮಾನ ಮತ್ತು ಸ್ವಇಚ್ಛೆಯೊಂದಿಗೆ ಭಾರತಕ್ಕೆ ಮರಳುತ್ತಾರೆಂಬ ವಿಶ್ವಾಸವಿದೆ.
ಅಲ್ಲಿನ ಹೆಚ್ಚಿನ ಜನರು ಭಾರತದೊಂದಿಗೆ ಸಂಪರ್ಕ ಹೊಂದಿದ್ದಾರೆ, ದಾರಿ ತಪ್ಪಿದ ಕೆಲವೇ ಜನರು ಅಲ್ಲಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

