ವಿಡಿಯೋ

Watch | ಖರ್ಗೆ ರಾಜ್ಯದ ಸಿಎಂ ಆದರೆ ನಮಗೆಲ್ಲರಿಗು ಸಂತೋಷ: ಜಿ. ಪರಮೇಶ್ವರ್

Published On :

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ರಾಜ್ಯದ ಎಲ್ಲಾ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ಇದೆ. ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುತ್ತದೆ ಮತ್ತು ಅದನ್ನು ಎಲ್ಲರೂ ಪಾಲಿಸಬೇಕಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಬಗ್ಗೆ ಮಾತನಾಡಿ, ಅದು ದಲಿತರು ಸೇರಿದಂತೆ ಜನರ ಬಯಕೆಯಾಗಿದ್ದು, ಈ ಕುರಿತು ಯಾವುದೇ ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಹುದ್ದೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪವಾಗಿದೆ ಎಂಬ ವದಂತಿಗಳ ಬಗ್ಗೆ ಜಿ ಪರಮೇಶ್ವರ, ಅವರು ಕರ್ನಾಟಕದ ಮುಖ್ಯಮಂತ್ರಿಯಾದರೆ ನಮಗೆಲ್ಲರಿಗೂ ಸಂತೋಷ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.