ವಿಡಿಯೋ

Watch | ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನ 300 ಅಡಿ ಕುಸಿತ; 12 ಮಂದಿಗೆ ಗಾಯ

Published On :

ಥೈಲ್ಯಾಂಡ್ ನ ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ AI2379 ಏರ್ ಇಂಡಿಯಾ ವಿಮಾನವು ಮಂಗಳವಾರ ಹಾರಾಟದ ವೇಳೆ ಟರ್ಬುಲೆನ್ಸ್ ಅಂದರೆ ಗಾಳಿಯ ಪ್ರಕ್ಷುಬ್ಧತೆಗೆ ಸಿಲುಕಿದೆ.

ಇದರಿಂದಾಗಿ ವಿಮಾನವು 300 ಅಡಿ ಕೆಳಕ್ಕೆ ಕುಸಿದಿದೆ. ಈ ಘಟನೆಯಲ್ಲಿ 12 ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಮಾನ ನಿಲ್ದಾಣದಲ್ಲಿ ತೆಗೆದ ದೃಶ್ಯಗಳಲ್ಲಿ ಟರ್ಮಿನಲ್ ಗೇಟ್ ಹೊರಗೆ ಆಂಬುಲೆನ್ಸ್‌ಗಳು ನಿಯೋಜಿಸಲಾಗಿದ್ದವು.

ಕೆಲ ಪ್ರಯಾಣಿಕರನ್ನು ವೀಲ್‌ಚೇರ್‌ಗಳಲ್ಲಿ ಹೊರತೆಗೆದುಕೊಂಡು ಬರುತ್ತಿರುವುದು ಕಂಡುಬಂದಿದೆ.

ಇನ್ನು ಕೆಲವರನ್ನು ತಲೆಗೆ ಬ್ಯಾಂಡೇಜ್ ಹಾಕಿಸಿಕೊಂಡ ಸ್ಥಿತಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.