ವಿಡಿಯೋ

Watch | ಸಂಸತ್ತಿಗೆ ಬಂದು ಹೇಳಿಕೆ ನೀಡಿ ಇಲ್ಲಾ ರಾಜೀನಾಮೆ ನೀಡಿ: ಖರ್ಗೆ ಆಗ್ರಹಕ್ಕೆ ರಿಜಿಜು ಹೇಳಿದ್ದಿಷ್ಟು...

Published On :

ಜುಲೈ 20 ರಂದು ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಏಕೆ ಹೇಳಿಕೆ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಶ್ನಿಸಿದ್ದಾರೆ.

ಸಂಸತ್ತಿನ ಎರಡೂ ಸದನಗಳು ನಿಷ್ಕ್ರಿಯವಾಗಿರುವುದಕ್ಕೆ ಸರ್ಕಾರವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

ವಿರೋಧ ಪಕ್ಷಗಳು ಚರ್ಚೆ ಬಯಸುತ್ತಿವೆ, ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಸದನಕ್ಕೆ ಬರಲು "ಭಯ"ಪಡುತ್ತಿದ್ದಾರೆ. ಅಂದರೆ ಅವರು ಏನೋ ತಪ್ಪು ಮಾಡಿದ್ದಾರೆಂದು ಅವರಿಗೆ ತಿಳಿದಿದೆ ಎಂದು ಖರ್ಗೆ ಹೇಳಿದರು.

ಸಂಸತ್ತಿಗೆ ಬಂದು ಹೇಳಿಕೆ ನೀಡಿ ಇಲ್ಲಾ ರಾಜೀನಾಮೆ ನೀಡಿ ಎಂದು ಖರ್ಗೆ ಒತ್ತಾಯಿಸಿದರು.

ಖರ್ಗೆ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ವಿದ್ಯಾರ್ಥಿ ಚಳವಳಿ ಮತ್ತು ಸಂಬಂಧಿತ ಚಟುವಟಿಕೆಗಳ ಕುರಿತು ಸಂಪೂರ್ಣ ಮತ್ತು ವಿವರವಾದ ಚರ್ಚೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.