Watch | ಉತ್ತರಿಸಲು ಸಿದ್ಧ- ಅಮಿತ್ ಶಾ; ನಿಮ್ಮ ಲೆಕ್ಚರ್ ಯಾರಿಗೆ ಬೇಕು?- ರಾಹುಲ್ ಗಾಂಧಿ
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮದ ಕುರಿತು ಚರ್ಚೆ ನಡೆಸಬೇಕೆಂಬ ವಿರೋಧ ಪಕ್ಷದ ಬೇಡಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಮೊದಲ ಪ್ರತಿಕ್ರಿಯೆ ನೀಡಿದರು.
ಸರ್ಕಾರ ಸಂಸತ್ತಿನಲ್ಲಿ ವಿವರವಾದ ಚರ್ಚೆಗೆ ಸಿದ್ಧವಾಗಿದೆ ಮತ್ತು ವಿರೋಧ ಪಕ್ಷಗಳು ಎತ್ತುವ ಪ್ರತಿಯೊಂದು ಪ್ರಶ್ನೆಗೆ ಉತ್ತರಿಸುವುದಾಗಿ ತಿಳಿಸಿದರು.
ಸಂಸತ್ತಿನ ಹೊರಗೆ ಮಾತನಾಡಿದ ಶಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮಧ್ಯಾಹ್ನ 2 ಗಂಟೆಯೊಳಗೆ ಪತ್ರ ಸಲ್ಲಿಸುವಂತೆ ವಿರೋಧ ಪಕ್ಷದ ನಾಯಕರನ್ನು ಕೇಳಿಕೊಂಡರು.
ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ ಅವರು ನಮಗೆ ಉಪನ್ಯಾಸ ನೀಡುವುದನ್ನು ಕೇಳಲು ನಮಗೆ ಆಸಕ್ತಿ ಇಲ್ಲ.
ಅಮಿತ್ ಶಾ ನಮ್ಮ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲು ಆದೇಶ ನೀಡಿದ್ದಾರೆಯೇ? ಅವರು ಹಾಗೆ ಮಾಡಿದ್ದರೆ ಅವರು ರಾಜೀನಾಮೆ ನೀಡಬೇಕು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

