ವಿಡಿಯೋ

Watch | 'ವಂದೇ ಮಾತರಂ' ವಿವಾದ: ಸೋನಿಯಾ ಗಾಂಧಿ ಅವರದ್ದು ಇಟಲಿ ರಕ್ತ ಅಲ್ವಾ..?

Published On :

ದೆಹಲಿಯ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ಆಚರಣೆ ಕಾರ್ಯಕ್ರಮದ ವೈರಲ್ ವಿಡಿಯೋವೊಂದು 'ವಂದೇ ಮಾತರಂ' ಕುರಿತು ಹೊಸ ವಿವಾದಕ್ಕೆ ಕಾರಣವಾಗಿದೆ.

'ವಂದೇ ಮಾತರಂ' ಗೀತೆಯನ್ನು ಹಾಡುತ್ತಿದ್ದ ವೇಳೆ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅದನ್ನು ಮಧ್ಯದಲ್ಲೇ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಟೀಕಿಸುತ್ತಿದ್ದಾರೆ.

ಆದರೆ, ಗೀತೆಯನ್ನು ಹಾಡುಗಾರರು ಮುಂದುವರಿಸಿದ್ದು, ಕಾರ್ಯಕ್ರಮದಲ್ಲಿ ಪೂರ್ಣ 'ವಂದೇ ಮಾತರಂ' ಹಾಡಲಾಗಿದೆ.

ಈ ಕುರಿತು ಸೋಮವಾರ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಸೋನಿಯಾ ಗಾಂಧಿ ನಮ್ಮ ದೇಶದವ್ರಾ? ಅವರದ್ದು ಇಟಲಿ ರಕ್ತ ಅಲ್ವಾ..? ಎಂದು ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.