Watch | ಬಲೂಚಿಸ್ತಾನದಲ್ಲಿ 145 ಉಗ್ರರ ಹತ್ಯೆ; ಭಾರತ-ಆಫ್ಘನ್ ವಿರುದ್ಧ ಪಾಕ್ ಆರೋಪ ಏನು?
ಪಾಕಿಸ್ತಾನದ ದಕ್ಷಿಣ ಪಶ್ಚಿಮ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ 145 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಭಾನುವಾರ ಹೇಳಿದೆ.
ಶನಿವಾರ ನಡೆದ ಆತ್ಮಾಹುತಿ ಹಾಗೂ ಗುಂಡಿನ ದಾಳಿಗಳಲ್ಲಿ ಒಟ್ಟು 33 ಮಂದಿ ಮೃತಪಟ್ಟಿದ್ದಾರೆ.
ಈ ಪೈಕಿ 18 ನಾಗರಿಕರು (ಐದು ಮಹಿಳೆಯರು ಮತ್ತು ಮೂರು ಮಕ್ಕಳು ಸೇರಿ) 15 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ದಾಳಿಗಳ ಬಳಿಕ ಶನಿವಾರ ಬೆಳಗ್ಗಿನಿಂದಲೇ ಬಲೂಚಿಸ್ತಾನದ ವಿವಿಧ ಪ್ರದೇಶಗಳಲ್ಲಿ ವ್ಯಾಪಕ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ತಿಳಿಸಿದೆ.
ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಅವರು, “ಭದ್ರತಾ ಪಡೆಗಳು ಮತ್ತು ಪೊಲೀಸರು ತ್ವರಿತವಾಗಿ ಪ್ರತಿಕ್ರಿಯಿಸಿ, ‘ಫಿತ್ನಾ ಅಲ್-ಹಿಂದೂಸ್ತಾನ್’ಗೆ ಸೇರಿದ 145 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

