Watch | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಬಾಗಲಕೋಟೆ ಉದ್ವಿಗ್ನ; ಫೆ.24ರವರೆಗೆ ನಿಷೇಧಾಜ್ಞೆ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಕಳೆದ ರಾತ್ರಿ ನಡೆದಿದ್ದು ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ.
ಮೆರವಣಿಗೆ ಸಾಗುತ್ತಿದ್ದವರ ಮೇಲೆ ಮಸೀದಿ ಕಡೆಯಿಂದ ಕಲ್ಲು ಬಂದಿದೆ.ನಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಎಸ್‌ಪಿ, ಪೊಲೀಸರ ಮೇಲೂ ಕಲ್ಲು ಬಿದ್ದಿದೆ ಎಂದು ಹಿಂದೂ ಮುಖಂಡರು ಹೇಳಿದ್ದಾರೆ.
ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

