Watch | ವಯನಾಡ್ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ
ಸೋಮವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ.
ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ.
ಭೂಕುಸಿತದಲ್ಲಿ ನಿರ್ಮಾಣ ಹಂತದಲ್ಲಿರುವ ಕೋಯಿಕ್ಕೋಡ್-ವಯನಾಡ್ ಅವಳಿ ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಸ್ಥಳದಲ್ಲಿ ಎನ್‌ಡಿಆರ್‌ಎಫ್ ತಂಡಗಳು ಮೊಕ್ಕಾಂ ಹೂಡಿವೆ. ಕಾರ್ಮಿಕರನ್ನು ನಿರ್ಮಾಣ ಸ್ಥಳಕ್ಕೆ ಸಾಗಿಸಿದ ಕೆಲವು ವಾಹನಗಳು ಮಣ್ಣಿನಲ್ಲಿ ಹೂತುಹೋಗಿರುವುದು ಕಂಡುಬಂದಿವೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

