Watch | ಇಲ್ಲಿಗೆ ಯಾರೂ ಬರೋಕು ಆಗೋದಿಲ್ಲ! ಒಡಿಶಾ ಕಾಂಗ್ರೆಸ್ ಶಾಸಕರನ್ನ ಮುಟ್ಟೋಕು ಆಗೋದಿಲ್ಲ!
ರಾಜ್ಯ ಚುನಾವಣೆಗೆ ಮೊದಲೇ ಒಡಿಶಾ ಕಾಂಗ್ರೆಸ್‌ನಲ್ಲಿ ಆಪರೇಷನ್ ಕಮಲದ ಭೀತಿ ಎದುರಾಗಿದ್ದು 14 ಮಂದಿ ಕಾಂಗ್ರೆಸ್ ಶಾಸಕರು ಗುರುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದಾರೆ.
ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ.
ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು.
ಶಾಸಕರಿಗೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ನಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಕ್ರವಾರ ವಂಡರ್ ಲಾ ರೆಸಾರ್ಟ್ ಗೆ ತೆರಳಿ ಒಡಿಶಾ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿ, ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

