Watch | ಪ್ರಶ್ನೆ ಪತ್ರಿಕೆ ಸೋರಿಕೆ: NEET ಪರೀಕ್ಷೆ ರದ್ದು, ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಂಗಳವಾರ ರದ್ದುಗೊಳಿಸಿದೆ ಮತ್ತು ಪರೀಕ್ಷೆಯನ್ನು ಮತ್ತೆ ನಡೆಸಲಾಗುವುದು ಎಂದು ಘೋಷಿಸಿದೆ.
ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ.
ಈ ಮಧ್ಯೆ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರ, ಸಿಬಿಐ ತನಿಖೆಗೆ ಆದೇಶಿಸಿದೆ.
ಈ ಬೆಳವಣಿಗೆಯು ಭಾರತ ಮತ್ತು ವಿದೇಶಗಳಲ್ಲಿನ 5432 ಕೇಂದ್ರಗಳಲ್ಲಿ ಪರೀಕ್ಷೆ ಬರೆದ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ.
ಏತನ್ಮಧ್ಯೆ, ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ) ನವದೆಹಲಿಯ ಶಾಸ್ತ್ರಿ ಭವನದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

