ವಿಡಿಯೋ

Watch | ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡಿ: ಪರಮೇಶ್ವರ್ ಸ್ಪಷ್ಟನೆ ಹೀಗಿದೆ...

Published On :

ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಇದೀಗ ಕಲ್ಪತರು ನಾಡು ತುಮಕೂರು ಜಿಲ್ಲೆಯ ಹೆಸರನ್ನು 'ಬೆಂಗಳೂರು ಉತ್ತರ' ಎಂದು ಬದಲಾಯಿಸುವ ಪ್ರಸ್ತಾಪ ಮುನ್ನೆಲೆಗೆ ಬಂದಿದೆ.

ತುಮಕೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ತುಮಕೂರನ್ನು 'ಬೆಂಗಳೂರು ಉತ್ತರ' ಜಿಲ್ಲೆ ಎಂದು ಘೋಷಣೆ ಮಾಡುವಂತೆ ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.

ಆದರೆ ಸಚಿವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

ಇದಕ್ಕೆ ಬುಧವಾರ ಪ್ರತಿಕ್ರಿಯಿಸಿದ ಸಚಿವರು, 'ದೆಹಲಿ ಎನ್‌ಸಿಆರ್ ಮಾದರಿಯಲ್ಲಿ' ಬೆಂಗಳೂರು ಪ್ರದೇಶವನ್ನು ಸೇರಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ಮತ್ತು ಹೂಡಿಕೆಗಳನ್ನು ಆಕರ್ಷಿಸುವ ಚಿಂತನೆಯಷ್ಟೇ ಎಂದು ಸ್ಪಷ್ಟನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.