Watch | 'ಕಾಂಗ್ರೆಸ್‌ನ ಸತತ ಸೋಲಿಗೆ ದಿಕ್ಕುದೆಸೆ ಇಲ್ಲದ ನಾಯಕತ್ವವೇ ಕಾರಣ'
ಕಾಂಗ್ರೆಸ್ ಪಕ್ಷವು ಸತತವಾಗಿ ಎದುರಿಸುತ್ತಿರುವ ಚುನಾವಣಾ ಸೋಲುಗಳಿಗೆ ಅದರ "ದಿಕ್ಕಿಲ್ಲದ ನಾಯಕತ್ವವೇ" ಕಾರಣ ಎಂದು ಕೇಂದ್ರ ಸಚಿವ ಶಿವರಾಜ್ ಚೌಹಾಣ್ ಸೋಮವಾರ ಹೇಳಿದ್ದಾರೆ.
ಅಲ್ಲದೆ, ತಮ್ಮ ಪದೇ ಪದೇ ಆಗುವ ಸೋಲುಗಳಿಗೆ ಚುನಾವಣಾ ಆಯೋಗದಂತಹ ಸಂಸ್ಥೆಗಳನ್ನು ಹೊಣೆಗಾರರನ್ನಾಗಿ ಮಾಡುವ ವಿರೋಧ ಪಕ್ಷದ ಕ್ರಮವನ್ನೂ ಅವರು ಟೀಕಿಸಿದ್ದಾರೆ.
"ಸತತವಾಗಿ ಚುನಾವಣೆಗಳಲ್ಲಿ ಸೋಲುವುದು ಮತ್ತು ಅದಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಭಟನೆಗಳನ್ನು ನಡೆಸುವುದು ಹಾಗೂ ವಿಷಯವನ್ನು ಬೀದಿಗೆ ತರುವುದು ಕಾಂಗ್ರೆಸ್‌ನ ಹಣೆಬರಹವಾಗಿದೆ...
ಇದಕ್ಕೆ ಸ್ವತಃ ಕಾಂಗ್ರೆಸ್‌ನ ದಿಕ್ಕಿಲ್ಲದ ನಾಯಕತ್ವವೇ ಕಾರಣ," ಎಂದು ನವದೆಹಲಿಯಲ್ಲಿ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚೌಹಾಣ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

