ವಿಡಿಯೋ

Watch | 2029ರ ಚುನಾವಣೆಯಲ್ಲಿ ಮತ್ತೊಂದು ಹೀನಾಯ ಸೋಲಿಗೆ ಸಿದ್ಧರಾಗಿ...

Published On :

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.

ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, ಈ ದೇಶದ ಜನರು ನರೇಂದ್ರ ಮೋದಿ ಜೊತೆ, ಬಿಜೆಪಿ ಜೊತೆ, NDA ಜೊತೆ ಇದ್ದಾರೆ.

2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ್ತೊಂದು "ಭಾರಿ ಸೋಲು" ಕಾದಿದೆ ಎಂದು ಅಮಿತ್ ಶಾ ಭವಿಷ್ಯ ನುಡಿದರು.

ಕಳೆದ 41 ವರ್ಷಗಳಲ್ಲಿ ಗುಜರಾತ್ ರಾಜ್ಯದಲ್ಲಿ ಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್ ವಿಫಲವಾಗಿದೆ; ಚುನಾವಣಾ ಫಲಿತಾಂಶಗಳನ್ನು ತಳ್ಳಿಹಾಕುವ ಬದಲು ರಾಹುಲ್ ಗಾಂಧಿ ಆತ್ಮಾವಲೋಕನ ಮಾಡಿಕೊಳ್ಳಬೇಕು;

ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿಯಲ್ಲಿ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ, ಆದರೆ ಬಿಜೆಪಿ ಗೆಲುವು ಸಾಧಿಸಿದೆ.

ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಭಾರಿ ಗೆಲುವು ರಾಹುಲ್ ಗಾಂಧಿಯವರಿಗೆ ಒಂದು ಪಾಠ ಎಂದು ಅಮಿತ್ ಶಾ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.