ವಿಡಿಯೋ

Watch | ಶೇ 96ರಷ್ಟು UPI ವಹಿವಾಟುಗಳ ಮೇಲೆ MDR ಪರಿಣಾಮ ಬೀರುವುದಿಲ್ಲ; ಗಲಾಟೆ ಯಾಕೆ?

Published On :

MDR ಮತ್ತು UPI ಕುರಿತ ಕೇಂದ್ರ ಸರ್ಕಾರದ ನಿರ್ಧಾರವು ಸ್ವಾಗತಾರ್ಹ ಕ್ರಮವಾಗಿದೆ ಎಂದು ಇನ್ಫೋಸಿಸ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ (CFO) ಮತ್ತು ಮಂಡಳಿಯ ಸದಸ್ಯ ಮೋಹನ್‌ದಾಸ್ ಪೈ ಹೇಳಿದ್ದಾರೆ;

ಇದು ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಪಾವತಿ ವಹಿವಾಟುಗಳಿಗೆ ಅಗತ್ಯವಿರುವ ಮೂಲಸೌಕರ್ಯಕ್ಕೆ ಹಣಕಾಸು ಒದಗಿಸಲು ಸಹಾಯ ಮಾಡುತ್ತದೆ ಎಂದು ಮೋಹನ್‌ದಾಸ್ ಪೈ ಹೇಳಿದರು.

ಅಲ್ಲದೆ, ಸುಮಾರು ಶೇ. 96 ರಷ್ಟು UPI ವಹಿವಾಟುಗಳ ಮೇಲೆ ಇದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ತೆರಿಗೆ ಸಮ್ಮೇಳನದ (International Tax Conference) ಸಂದರ್ಭದಲ್ಲಿ ಪೈ ಮಾದ್ಯಮಗಳೊಂದಿಗೆ ಮಾತನಾಡಿದರು.

ಸುಮಾರು ಶೇ. 70 ರಷ್ಟು UPI ಪಾವತಿಗಳು ವ್ಯಕ್ತಿಯಿಂದ ವ್ಯಕ್ತಿಗೆ (P2P) ನಡೆಯುವ ವಹಿವಾಟುಗಳಾಗಿದ್ದು ಅವು ಉಚಿತವಾಗಿಯೇ ಮುಂದುವರಿಯಲಿವೆ.

ಅಲ್ಲದೆ, 2,000 ರೂ.ಗಿಂತ ಕಡಿಮೆ ಮೌಲ್ಯದ ವಹಿವಾಟುಗಳಿಗೆ MDR ನಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.