Watch | ಭಟ್ಕಳ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ; ಎರಡು ಎಫ್‌ಐಆರ್ ದಾಖಲು
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬುಧವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆಗಳು ವರದಿಯಾಗಿದೆ.
ಈ ಸಂಬಂಧ ಎರಡೂ ಕಡೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪೊಲೀಸರು ಎರಡು ಎಫ್‌ಐಆರ್‌ಗಳನ್ನು (FIR) ದಾಖಲಿಸಿದ್ದಾರೆ.
ಈ ಸಂಬಂಧ ಸ್ಥಳೀಯ ನಿವಾಸಿ ಅಬ್ದುಲ್ ಆಲಿಮ್ ಅವರು ದೂರು ಸಲ್ಲಿಸಿದ್ದಾರೆ.
ಗುಲ್ಮಿಯ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮಿಯಾ ಮಸೀದಿ ಮತ್ತು ತಾಜುಸುನ್ನಾ ಅರೇಬಿಕ್ ಮದ್ರಸಾದ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಇದರಿಂದ ಎರಡು ಕಿಟಕಿ ಗಾಜುಗಳು ಜಖಂಗೊಂಡಿವೆ.
ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಗಣೇಶ ಮೆರವಣಿಗೆಯ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ಪ್ರತಿದೂರು ಕೂಡ ದಾಖಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

