ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 35 ಸಾವು
ಅಫಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಒಂದೇ ದಿನ ಸಂಭವಿಸಿದ ಎರಡು ಪ್ರಬಲ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು,...

ಕಾಬೂಲ್: ಅಫಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಒಂದೇ ದಿನ ಸಂಭವಿಸಿದ ಎರಡು ಪ್ರಬಲ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಸುಮಾರು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೂರ್ವ ಕಾಬೂಲ್‌ನ ಶಾ ಶಹೀದ್ ಪ್ರದೇಶದಲ್ಲಿ ಮೊದಲ ಭೀಕರ ಟ್ರಕ್ ಬಾಂಬ್ ಸ್ಫೋಟಗೊಂಡಿದ್ದು, ಈ ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 240ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಫ್ಘನ್ ಸೇನಾ ಶಿಬಿರವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದ್ದು, ಸ್ಫೋಟದ ತೀವ್ರತೆಗೆ ರಸ್ತೆ ನಡುವೆ ಸುಮಾರು 10 ಮೀಟರ್ ವ್ಯಾಪ್ತಿಯಲ್ಲಿ ಗುಂಡಿ ಬಿದ್ದಿದ್ದು, ಅಕ್ಕಪಕ್ಕದ ಮನೆ ಮತ್ತು ಅಂಗಡಿಮುಂಗಟ್ಟಗಳು ಸಂಪೂರ್ಣ ನೆಲಸಮವಾಗಿವೆ.
ಇನ್ನು ಪೊಲೀಸ್ ಅಕಾಡೆಮಿಯ ಹೊರಗಿನ ಗೇಟ್‌ನಲ್ಲಿ ಎರಡನೇ ಸ್ಫೋಟ ಸಂಭವಿಸಿದ್ದು, ಈ ಸ್ಫೋಟದಲ್ಲಿ 20ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಯಾವ ಉಗ್ರ ಸಂಘಟನೆಯೂ ಇದುವರೆಗೂ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


