ಕಾಬೂಲ್‌ನಲ್ಲಿ ಎರಡು ಪ್ರತ್ಯೇಕ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ 40ಕ್ಕೆ ಏರಿಕೆ
ಆಘ್ಫಾನಿಸ್ತಾನದಲ್ಲಿ ನಡೆದ ಎರಡು ಪ್ರತ್ಯೇಕ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ನ್ಯಾಟೋ ಸೈನಿಕರು ಸೇರಿದಂತೆ 40 ಮಂದಿ ಮೃತಪಟ್ಟಿದ್ದಾರೆ...

Published On :
ಕಾಬೂಲ್: ಆಘ್ಫಾನಿಸ್ತಾನದಲ್ಲಿ ನಡೆದ ಎರಡು ಪ್ರತ್ಯೇಕ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ನ್ಯಾಟೋ ಸೈನಿಕರು ಸೇರಿದಂತೆ 40 ಮಂದಿ ಮೃತಪಟ್ಟಿದ್ದಾರೆ ಎಂದು ಆಂತರಿಕ ಸಚಿವಾಲಯ ಹೇಳಿದೆ.
ಕಳೆದ ರಾತ್ರಿ ಸ್ಫೋಟಕಗಳು ತುಂಬಿದ್ದ ಟ್ರಕ್ ಒಂದನ್ನು ಜನದಟ್ಟಣೆ ಇರುವ ರಸ್ತೆಗೆ ನುಗ್ಗಿಸಿ ಮೊದಲ ಸ್ಫೋಟ ನಡೆಸಲಾಯಿತು. ಸ್ಫೋಟದ ತೀವ್ರತೆಗೆ 10 ಅಡಿ ಆಳದವರೆಗೆ ಭೂಮಿ ಬಿರುಕು ಬಿಟ್ಟಿತ್ತು. ಸುತ್ತಮುತ್ತಲಿನ ಕಟ್ಟಡಗಳು ನೆಲಕ್ಕುರುಳಿದ್ದವು. ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟು, 240ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.
ಇದಾದ ಬಳಿಕ ಕೆಲ ಗಂಟೆಗಳು ಅಂತರದಲ್ಲಿ ಪೊಲೀಸ್ ಸಮವಸ್ತ್ರ ಧರಿಸಿ ಬಂದ ದಾಳಿಕೋರನೊಬ್ಬ ಕಾಬೂಲ್‌ನಲ್ಲಿರುವ ಪೊಲೀಸ್ ಅಕಾಡೆಮಿಯ ಮುಂದೆ ಸ್ಫೋಟಿಸಿಕೊಂಡನು. ಈ ಘಟನೆಯಲ್ಲಿ 20 ಆಫ್ಘನ್ ಪೊಲೀಸ್ ಕೆಡೆಟ್‌ಗಳು ಬಲಿಯಾದರು. ಒಟ್ಟಾರೆ ಪ್ರತ್ಯೇಕ ದಾಳಿಯಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ.
ತಾಲಿಬಾನ್ ಮುಖಂಡ ಮುಲ್ಲಾ ಒಮರ್ ಮೃತಪಟ್ಟಿರುವುದನ್ನು ಅಧಿಕೃತವಾಗಿ ಘೋಷಿಸಿದ ನಂತರ ನಡೆಯುತ್ತಿರುವ ಮೊದಲ ಭೀಕರ ದಾಳಿ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


