ವಾಸೀಂ ಅಕ್ರಂ ಮೇಲೆ ದಾಳಿ: ಶಂಕಿತ ವ್ಯಕ್ತಿಯ ಬಂಧನ
ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ವ್ಯಕ್ತಿಯೊಬ್ಬನನ್ನು ಪಾಕಿಸ್ತಾನ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿರುವುದಾಗಿ ತಿಳಿದುಬಂದಿದೆ...

ಕರಾಚಿ: ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಂ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ವ್ಯಕ್ತಿಯೊಬ್ಬನನ್ನು ಪಾಕಿಸ್ತಾನ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿರುವುದಾಗಿ ತಿಳಿದುಬಂದಿದೆ.
ಕರಾಚಿಯ ನ್ಯಾಷನಲ್ ಸ್ಟೇಡಿಯಂ ನಲ್ಲಿ ವಾಸೀಂ ಅಕ್ರಂ ಅವರು ವೇಗದ ಬೌಲರ್ ಗಳಿಗೆ ತರಬೇತಿ ನೀಡುತ್ತಿದ್ದಾರೆ. ಇದಕ್ಕೆಂದು ಅವರು ರಾಷ್ಟ್ರೀಯ ಕ್ರೀಡಾಂಗಣದ ಕಡೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಅಕ್ರಂ ಇದ್ದ ಕಾರಿಗೆ ಗುದ್ದಿ ಪರಾರಿಯಾಗಿದ್ದಾನೆ. ನಂತರ ಕೋಪಗೊಂಡ ಅಕ್ರಂ ಅವರು ತಮ್ಮ ಮರ್ಸಿಡೆಸ್ ಬೆಂಜ್ ಕಾರಿನಲ್ಲಿ ಗುದ್ದಿದ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮತಿ ನಡೆದಿದೆ. ನಂತರ ಕಾರಿನ ಚಾಲಕ ಕೆಳಗಿಳಿಯುವಂತೆ ಅಕ್ರಂ ಸೂಚಿಸಿದ್ದಾರೆ. ಈ ವೇಳೆ ಕಾರಿನಿಂದ ಕೆಳಗಿಳಿದ ವ್ಯಕ್ತಿ ಏಕಾಏಕಿ ಅಕ್ರಂ ಅವರತ್ತೆ ಗುಂಡಿನ ದಾಳಿ ನಡೆಸಿದ್ದಾನೆಂದು ಹೇಳಲಾಗುತ್ತಿತ್ತು.
ಘಟನೆ ಕುರಿತಂತೆ ವಾಸೀಂ ಅಕ್ರಮ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಇದೀಗ ವಾಸೀಂ ಅಕ್ರಂ ಮೇಲೆ ದಾಳಿ ಮಾಡಿದ ಶಂಕಿತ ಕಾರು ಚಾಲಕನನ್ನು ಬಂಧನಕ್ಕೊಳಪಡಿಸಿದ್ದು. ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


