ಪಾಕಿಸ್ತಾನ- ಚೀನಾದಿಂದ 2 ಬಿಲಿಯನ್ ಡಾಲರ್ ಮೌಲ್ಯದ ಒಪ್ಪಂದಗಳಿಗೆ ಸಹಿ
ಪಾಕಿಸ್ತಾನ ಹಾಗೂ ಚೀನಾ 2 ಬಿಲಿಯನ್ ಡಾಲರ್ ಮೌಲ್ಯದ 20 ಒಪ್ಪಂದಗಳಿಗೆ ಸಹಿ ಹಾಕಿವೆ.

ಇಸ್ಲಾಮಾಬಾದ್: ಪಾಕಿಸ್ತಾನ ಹಾಗೂ ಚೀನಾ 2 ಬಿಲಿಯನ್ ಡಾಲರ್ ಮೌಲ್ಯದ 20 ಒಪ್ಪಂದಗಳಿಗೆ ಸಹಿ ಹಾಕಿವೆ. ಇಂಧನ, ಸಂವಹನ, ಸಾಮಾಜಿಕ ಸೇವೆ, ಕೃಷಿ, ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಒಪ್ಪಂದ ನಡೆದಿದೆ.
ಚೀನಾದಲ್ಲಿ ನಡೆದ ಎರಡು ದಿನಗಳ ಕಾಲ ನಡೆದ ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಕಾರ್ಯಕ್ರಮದಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಒಪ್ಪಂದದ ವೇಳೆ 35 ಚೀನಾ ಕಂಪನಿಗಳ ಒಕ್ಕೂಟವನ್ನು ರಚಿಸಲಾಗಿದ್ದು ಪಾಕಿಸ್ತಾನದಲ್ಲಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಪಾಕ್ ನ ಮಾಧ್ಯಮ ವರದಿ ಮಾಡಿದೆ.
ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಒಕ್ಕೂಟದ ಮುಂದಿನ ಸಭೆ ಅಕ್ಟೋಬರ್ ನಲ್ಲಿ ನಡೆಯಲಿದೆ. ಚೀನಾ- ಪಾಕಿಸ್ತಾನ ನಡುವೆ ನಡೆದಿರುವ ಬಾಹ್ಯಾಕಾಶ ತಂತ್ರಜ್ಞಾನ ಸಹಕಾರ ಒಪ್ಪಂದ ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವೃದ್ಧಿಸುತ್ತದೆ ಎಂದು ಪಾಕಿಸ್ತಾನ ಅಭಿವೃದ್ಧಿ ಹಾಗೂ ಸುಧಾರಣೆ ಸಚಿವ ಆಶಾನ್ ಇಕ್ಬಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎಕೆನಾಮಿಕ್ ಕಾರಿಡಾರ್ ನ್ನು ಶೀಘ್ರವೇ ಅನುಷ್ಠಾನಗೊಳಿಸುವುದಾಗಿ ಪಾಕ್ ಸಚಿವ ಭರವಸೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಸಮಸ್ಯೆ ಉಂಟಾದರೆ ತಮ್ಮನ್ನು ನೇರವಾಗಿ ಸಂಪರ್ಕಿಸುವಂತೆ ಹೂಡಿಕೆದಾರರಿಗೆ ತಿಳಿಸಿರುವುದಾಗಿ ಇಕ್ಬಾಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


