ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಪಾಕ್ ಒಪ್ಪಿಗೆ
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ...

ಇಸ್ಲಾಮಾಬಾದ್ :ಭಾರತ ಮತ್ತು ಪಾಕಿಸ್ತಾನ ಮಧ್ಯೆ ಈ ತಿಂಗಳ ಅಂತ್ಯಕ್ಕೆ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಗೆ ಭಾರತ ನೀಡಿರುವ ಆಹ್ವಾನವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.
ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಶರೀಫ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್, ಅವರು ಭಾರತಕ್ಕೆ ಈ ತಿಂಗಳ 23ಕ್ಕೆ ಆಗಮಿಸಲಿದ್ದಾರೆ.ತಮ್ಮ ಈ ಭೇಟಿ ಮಹತ್ವದ್ದಾಗಿದ್ದು, ಎರಡೂ ದೇಶಗಳ ನಡುವಣ ಪ್ರಮುಖ ವಿವಾದಗಳನ್ನು ಬಗೆಹರಿಸಲು ಸಹಾಯವಾಗಬಹುದು ಎಂದು ಅವರು ಆಶಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಷ್ಯಾ ಸಮಿತ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆ ನಡೆಸುವಂತೆ ಸಲಹೆ ನೀಡಿದ್ದರು. ಗಡಿ ಭಾಗದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವುದು ಸಭೆಯಲ್ಲಿ ಚರ್ಚೆಗೊಳ್ಳುವ ವಿಷಯಗಳಲ್ಲಿ ಪ್ರಮುಖವಾಗಿದೆ.
ಭಾರತ ಮತ್ತು ಪಾಕಿಸ್ತಾನ ನಡುವಣ ಹಗೆತನ ಸುಮಾರು ಏಳು ದಶಕದ್ದು. ಗಡಿ ನಿಯಂತ್ರಣ ರೇಖೆಯಲ್ಲಿ ಪದೇ ಪದೇ ಯುದ್ಧ ನಡೆಯುವುದು, ಭಯೋತ್ಪಾದನೆ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಇನ್ನೂ ಜಾಸ್ತಿಯಾಗಿದೆ.
ಈ ಮಧ್ಯೆ ಸ್ವಾತಂತ್ರ್ಯೋತ್ಸವಕ್ಕೆ ಇನ್ನೆರಡು ದಿನ ಬಾರಿ ಇರುವಾಗಲೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಶ್ಮೀರ ಕಣಿವೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


