ವಿದೇಶ

ಯುಎಇನಲ್ಲಿ ಮೋದಿ: ಮಸೀದಿಗೆ ಭೇಟಿ, ಹೂಡಿಕೆದಾರರೊಂದಿಗೆ ಮಾತುಕತೆ

ಎರಡು ದಿನಗಳ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಕಾರ್ಬನ್ ಮುಕ್ತ ಮಸ್ಡಾರ್ ನಗರಕ್ಕೆ ಭೇಟಿ ನೀಡಿದ್ದು, ಅಲ್ಲಿನ ...

ಯುಎಇನಲ್ಲಿ ಮೋದಿ: ಮಸೀದಿಗೆ ಭೇಟಿ, ಹೂಡಿಕೆದಾರರೊಂದಿಗೆ ಮಾತುಕತೆ
ನರೇಂದ್ರ ಮೋದಿ - ರಾಜಕುಮಾರ ಶೇಖ್‌ ಮಹಮ್ಮದ್‌ ಬಿನ್‌ ಝಾಯೇದ್‌
Published On :

ಅಬುಧಾಬಿ: ಎರಡು ದಿನಗಳ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಕಾರ್ಬನ್ ಮುಕ್ತ ಮಸ್ಡಾರ್ ನಗರಕ್ಕೆ ಭೇಟಿ ನೀಡಿದ್ದು, ಅಲ್ಲಿನ ಉದ್ಯಮಿಗಳನ್ನು ಹಾಗೂ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ವೇಳೆ ಭಾರತದಲ್ಲಿ ಹೂಡಿಕೆ ಅವಕಾಶಗಳ ಬಗ್ಗೆ ಯುಎಇ ಉದ್ಯಮಿಗಳಿಗೆ ಪ್ರಧಾನಿ ಮನವರಿಕೆ ಮಾಡಿಕೊಡಲಿದ್ದಾರೆ. ಅಲ್ಲದೆ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಸಮೂದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವ್ಯಾಪಾರ, ಸಂಬಂಧ ಸುಧಾರಣೆ, ಇಂಧನ ಮತ್ತು ಭದ್ರತೆ ಕುರಿತಾದ ಮಹತ್ವದ ವಿಷಯಗಳ ಬಗ್ಗೆ ಮೋದಿ ಪ್ರಧಾನಿ ಮೊಹಮ್ಮದ್ ಬಿನ್ ರಶೀದ್ ಅಲ್ ಮುಕ್ತುಮ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಐಸಿಸ್‌ ಉಗ್ರರ ಹಾವಳಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಮೂರು ದಶಕಗಳ ನಂತರ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಯುಎಇಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಸ್ವತಃ ಅಬುಧಾಬಿಯ ರಾಜಕುಮಾರ ಶೇಖ್‌ ಮಹಮ್ಮದ್‌ ಬಿನ್‌ ಝಾಯೇದ್‌ ಮತ್ತು ಅವರ ಐವರು ಸೋದರರು ವಿಮಾನ ನಿಲ್ದಾಣಕ್ಕೆ ಆಗಮಿಸಿ ನಿನ್ನೆ ಪ್ರಧಾನಿ ನರೇಂದ್ರ ಮೋದಿಗೆ ಅದ್ಧೂರಿ ಸ್ವಾಗತಿ ನೀಡಿದ್ದರು.

ಬಳಿಕ ಮೋದಿ ಅಬುಧಾಬಿಯ ಐತಿಹಾಸಿಕ ಶೇಖ್ ಜಾಯೆದ್ ಗ್ರಾಂಡ್ ಮಸೀದಿಗೆ ಭೇಟಿ ನೀಡಿದರು. ಸುಮಾರು 40 ನಿಮಿಷಗಳ ಕಾಲ ಮಸೀದಿಯಲ್ಲೇ ಕಳೆದರು. ಅಲ್ಲಿರುವ ಭಾರತೀಯ ಕಾರ್ಮಿಕರನ್ನು ಭೇಟಿಯಾದ ಮೋದಿ, ಅವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳನ್ನು ಪರಿಹರಿಸಲು ಭಾರತ ಸರ್ಕಾರ ಏನು ಮಾಡಬಹುದು ಎಂಬ ಬಗ್ಗೆ ಚರ್ಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.