ಭಾರತ- ಪಾಕ್ ಭದ್ರತಾ ಸಲಹೆಗಾರರ ಮಾತುಕತೆಗೆ ವಿಶ್ವಸಂಸ್ಥೆ ಶ್ಲಾಘನೆ
ಆಗಸ್ಟ್ 23 ರಂದು ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ(ಎನ್ಎಸ್ಎ) ಮಾತುಕತೆ ನಡೆಯಲಿರುವುದನ್ನು ವಿಶ್ವಸಂಸ್ಥೆ ಸ್ವಾಗತಿಸಿದೆ.

ವಿಶ್ವಸಂಸ್ಥೆ: ಆಗಸ್ಟ್ 23 ರಂದು ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ(ಎನ್ಎಸ್ಎ) ಮಾತುಕತೆ ನಡೆಯಲಿರುವುದನ್ನು ವಿಶ್ವಸಂಸ್ಥೆ ಸ್ವಾಗತಿಸಿದೆ.
ಗಡಿ ಪ್ರದೇಶದ ಜನರನ್ನು ರಕ್ಷಿಸಲು ಗಡಿ ನಿಯಂತ್ರಣ ರೇಖೆಯಲ್ಲಿ ಗರಿಷ್ಠ ಸಂಯಮ ಕಾಪಾಡಿಕೊಳ್ಳುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಸಲಹೆ ನೀಡಿದ್ದಾರೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯ ವಕ್ತಾರರು ಹೇಳಿಕೆ ನೀಡಿದ್ದು ಭಾರತ- ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಮಾತುಕತೆ ನಡೆಸುತ್ತಿರುವುದಕ್ಕೆ ಯುಎನ್ ಕಾರ್ಯದರ್ಶಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಪಾಕ್- ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರು ಆ.23 ರಂದು ಸಭೆ ನಡೆಸಲಿದ್ದಾರೆ.
ಎನ್.ಎಸ್.ಎ ಮಾತುಕತೆ ನಿಗದಿಯಾದಾಗಿನಿಂದ ಪಾಕಿಸ್ತಾನ ಗಡಿ ಭಾಗದಲ್ಲಿ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಪಾಕಿಸ್ತಾನ ಮಂಗಳವಾರವೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು ಓರ್ವ ನಾಗರಿಕನಿಗೆ ಗಾಯಗಳಾಗಿವೆ. ಸರ್ತಾಜ್ ಅಜೀಜ್ ಹಾಗೂ ಅಜಿತ್ ದೋವಲ್ ನಡುವಿನ ಮಾತುಕತೆ ಯಶಸ್ವಿಯಾಗಲಿದೆ ಎಂದು ವಿಶ್ವಸಂಸ್ಥೆ ಕಾರ್ಯದರ್ಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


