'ಅಪ್ಪ'ನನ್ನು ಗುಂಡಿಟ್ಟು ಕೊಂದ ಪುಟ್ಟ ಮಗು
2 ವರ್ಷದ ಮಗು ತನ್ನ ತಂದೆಯನ್ನೇ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಅಮೇರಿಕಾದಲ್ಲಿ...

ನ್ಯೂಯಾರ್ಕ್: 2 ವರ್ಷದ ಮಗು ತನ್ನ ತಂದೆಯನ್ನೇ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಅಮೇರಿಕಾದಲ್ಲಿ ನಡೆದಿದೆ.
ಅಲಬಾಮಾ ರಾಜ್ಯದಲ್ಲಿ ಈ ಘಟನೆ ನಡೆದಿದೆ. ಬುಲೆಟ್ ಲೋಡ್ ಆಗಿದ್ದ ಗನ್ ಹಿಡಿದು ಎರಡು ವರ್ಷದ ಮಗು ಆಟವಾಡುತ್ತಿತ್ತು. ಈ ಸಮಯದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿದ್ದು, ಅದು ತಂದೆಯ ಹಣೆಗೆ ತಗುಲಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತಂದೆ ಸಾವನ್ನಪ್ಪಿದ್ದಾರೆ.
ಇದೊಂದು ಆಕಸ್ಮಿಕವಾದ ಘಟನೆಯಾಗಿದ್ದು ಆ ಸಮಯದಲ್ಲಿ ತಾನು ಮನೆಯಲ್ಲಿ ಇರಲಿಲ್ಲ. ನಾನು ಮನೆಗೆ ಬರುವಷ್ಟರಲ್ಲಿ ಪತಿ ರಕ್ತದ ಮಡುವಿನಲ್ಲಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಬಾಲಕನ ತಾಯಿ ಪ್ರತಿಕ್ರಯಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮಗುವಿನ ಕೈಯಲ್ಲಿ ಪಿಸ್ತೂಲ್ ನೀಡಿರುವುದೇ ಈ ಅನಾಹುತಕ್ಕೆ ಕಾರಣ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


