ಶೋರ್ಹ್ಯಾಂ ವೈಮಾನಿಕ ಪ್ರದರ್ಶನದಲ್ಲಿ ವಿಮಾನ ಪತನ: 7ಸಾವು
ಇಂಗ್ಲೆಂಡಿನ ಶೋರ್ಹ್ಯಾಂ ವೈಮಾನಿಕ ಪ್ರದರ್ಶನದ ಸಮಯದಲ್ಲಿ ಜೆಟ್ ವಿಮಾನವೊಂದು ವಾಹನ ದಟ್ಟಣೆಯಿಂದ ಕೂಡಿದ್ದ ರಸ್ತೆಗೆ ಅಪ್ಪಳಿಸಿದ ಪರಿಣಾಮ ಸ್ಪೋಟಗೊಂಡು...

ಇಂಗ್ಲೆಂಡಿನ ಶೋರ್ಹ್ಯಾಂ ವೈಮಾನಿಕ ಪ್ರದರ್ಶನದ ಸಮಯದಲ್ಲಿ ಜೆಟ್ ವಿಮಾನವೊಂದು ವಾಹನ ದಟ್ಟಣೆಯಿಂದ ಕೂಡಿದ್ದ ರಸ್ತೆಗೆ ಅಪ್ಪಳಿಸಿದ ಪರಿಣಾಮ ಸ್ಪೋಟಗೊಂಡು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.14ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಲೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಏರ್ ಶೋದಲ್ಲಿ ಹಲವಾರು ವಿಮಾನಗಳು ಕಸರತ್ತು ನಡೆಸುತ್ತಿದ್ದವು. ಈ ಸಮಯದಲ್ಲಿ ಹಾಕರ್ ಹಂಟರ್ ಎಂಬ ವಿಮಾನದ ಪೈಲಟ್ ಆಗಸದಲ್ಲಿ ಸಾಕಷ್ಟು ಎತ್ತರಕ್ಕೆ ತೆರಳಿ ಪಲ್ಟಿ ಹೊಡೆಯುವ ಕಸರತ್ತು ಪ್ರದರ್ಶಿಸುತ್ತಿತ್ತು. ಸಂದರ್ಭದಲ್ಲಿ ವಿಮಾನ ನೆಲಮಟ್ಟಕ್ಕೆ ತಲುಪಿ, ಅಲ್ಲಿಂದ ಆಗಸಕ್ಕೆ ಚಿಮ್ಮಬೇಕಿತ್ತು. ಆದರೆ ಈ ವೇಳೆ ವಿಮಾನ ಆಯ ತಪ್ಪಿದ್ದು ತಕ್ಷಣ ರಸ್ತೆಗೆ ಅಪ್ಪಳಿಸಿತು. ಇದರಿಂದ ವಿಮಾನ ಸ್ಪೋಟಗೊಂಡಿತಲ್ಲದೇ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿತು ಎನ್ನಲಾಗಿದೆ.
ಅಪಘಾತಕ್ಕೀಡಾದ ವಿಮಾನದ ಪೈಲಟ್ ಅನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


