ಶೀಘ್ರದಲ್ಲೇ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ: ಸುಷ್ಮಾ ಸ್ವರಾಜ್
ಉಭಯ ದೇಶಗಳ ನಡುವೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ನಿಂತು ಹೋದ ಮಾತುಕತೆಗೆ ಮರು ಚಾಲನೆ ನೀಡಿ ಶೀಘ್ರವೇ ದ್ವಿಪಕ್ಷೀಯ ಮಾತುಕತೆ ...

ಇಸ್ಲಮಾಬಾದ್: ಉಭಯ ದೇಶಗಳ ನಡುವೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ನಿಂತು ಹೋದ ಮಾತುಕತೆಗೆ ಮರು ಚಾಲನೆ ನೀಡಿ ಶೀಘ್ರವೇ ದ್ವಿಪಕ್ಷೀಯ ಮಾತುಕತೆ ಆರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರನ್ನು ಭೇಟಿಯಾದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಎರಡು ರಾಷ್ಚ್ರಗಳ ಸಂಬಂಧ ಅಭಿವೃದ್ಧಿಗೆ ಸಿದ್ದವಿದ್ದು, ದ್ವೀಪಕ್ಷಿಯ ಮಾತುಕತೆ, ಎಲ್ಲಿ ಯಾವಾಗ, ನಡೆಯಬೇಕು ಎಂಬುದರ ಬಗ್ಗೆ ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ವಿಷಯವನ್ನು ನಾಳೆ ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿಯೂ ಸಹ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಮತ್ತು ಶರೀಫ್ ಅವರ ವಿದೇಶಾಂಗ ವ್ಯವಹಾರಗಳ ಸಲಹೆಗಾರರಾದ ಸರ್ತೇಜ್ ಅಜೀಜ್ ಈ ವೇಳೆ ಹಾಜರಿದ್ದರು.
ಆಫ್ಘಾನಿಸ್ತಾನದಲ್ಲಿ ಸುಸ್ಥಿರತೆ ಹಾಗೂ ಶಾಂತಿ ಸ್ಥಾಪಿಸುವ ಸಲುವಾಗಿ ನಡೆದ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಮಾತನಾಡಿದ ಸುಷ್ಮಾ, 'ಇಢಿ ವಿಶ್ವವೇ ಬದಲಾವಣೆಗೆ ಹಾತೊರೆಯುತ್ತಿದ್ದು, ಭಾರತ ಹಾಗೂ ಪಾಕಿಸ್ತಾನ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಬುದ್ಧತೆ ಹಾಗೂ ಆತ್ಮವಿಶ್ವಾಸ ತೋರಲು ಇದು ಸಕಾಲ,' ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


