ಪಾಕಿಸ್ತಾನ: ಮಾರ್ಕೆಟ್ನಲ್ಲಿ ಬಾಂಬ್ ಸ್ಫೋಟ; 15 ಮಂದಿ ಸಾವು
ಪಾಕಿಸ್ತಾನದ ಪರಾಚಿನಾರ್ ನಗರದ ಮಾರ್ಕೆಟ್ ವೊಂದರಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಬಾಂಬ್ ಸ್ಫೋಟದಲ್ಲ ಕನಿಷ್ಠ 15 ಮಂದಿ ಮೃತಪಟ್ಟಿದ್ದು...

Published On :
ಪರಾಚಿನಾರ್: ಪಾಕಿಸ್ತಾನದ ಪರಾಚಿನಾರ್ ನಗರದ ಮಾರ್ಕೆಟ್ ವೊಂದರಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಬಾಂಬ್ ಸ್ಫೋಟದಲ್ಲ ಕನಿಷ್ಠ 15 ಮಂದಿ ಮೃತಪಟ್ಟಿದ್ದು, 30 ರಿಂದ 50 ಜನರಿಗೆ ಗಾಯಗಳಾಗಿವೆ.
ಆಫ್ಘಾನಿಸ್ತಾನಕ್ಕೆ ಹೊಂದಿಕೊಂಡಿರುವ ಕುರುಮ್ ಪ್ರಾಂತ್ಯದ ಪರಾಚಿನಾರ್ ನಗರದ ಬಟ್ಟೆ ಮಾರುಕಟ್ಟೆಯಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ಚಳಿಗಾಲ ಪ್ರಾರಂಭವಾಗಿರುವ ಕಾರಣ ಬಟ್ಟೆ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿಯಿದ್ದ ಪರಿಣಾಮ ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.
ಬಾಂಬ್ ಸ್ಫೋಟದ ನಿಖರ ಮಾಹಿತಿ ಇನ್ನು ಲಭ್ಯವಾಗಿಲ್ಲ. ಇದೊಂದು ಆತ್ಮಾಹುತಿ ಬಾಂಬ್ ದಾಳಿಯೇ ಅಥವಾ ಮಾರುಕಟ್ಟೆಯಲ್ಲಿ ಬಾಂಬ್ ಇಡಲಾಗಿತ್ತೇ ಎಂಬ ಮಾಹಿತಿ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕುರುಮ್ ಪ್ರಾಂತ್ಯವು ಸೂಕ್ಷ್ಮ ಪ್ರದೇಶವಾಗಿದ್ದು, ಆದಿವಾಸಿ ಜನರು ಹೆಚ್ಚಾಗಿ ವಾಸಿಸುತ್ತಾರೆ. ಈ ಭಾಗದಿಂದಲೇ ಉಗ್ರವಾದಿಗಳು ಆಫ್ಘಾನಿಸ್ತಾನದಿಂದ ಪಾಕಿಸ್ತಾನವನ್ನು ಪ್ರವೇಶಿಸುತ್ತಾರೆ ಮತ್ತು ಇಲ್ಲಿ ಅಪರಾಧ ಪ್ರಕರಣಗಳು ಹೆಚ್ಚು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


