ಫ್ರಾನ್ಸ್ ಅಧ್ಯಕ್ಷ ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿ
ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಈ ಬಾರಿ ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ...

Published On :
ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಈ ಬಾರಿ ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
67ನೇ ಗಣರಾಜ್ಯ ದಿನಕ್ಕೆ ಮುಖ್ಯ ಅತಿಥಿಯಾಗಲು ಹೊಲಾಂಡೆ ಅವರು ಒಪ್ಪಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಫ್ರಾನ್ಸ್ ನ ಅಧ್ಯಕ್ಷರೊಬ್ಬರು ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ಇದು 5ನೇ ಬಾರಿ. 1976, 1980, 1998 ಮತ್ತು 2008ರಲ್ಲೂ ಫ್ರಾನ್ಸ್ ಅಧ್ಯಕ್ಷರೇ ಮುಖ್ಯ ಅತಿಥಿಯಾಗಿದ್ದರು. ಭೂತಾನ್ ಅಧ್ಯಕ್ಷರು ನಾಲ್ಕು ಬಾರಿ ಈ ಅವಕಾಶ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


