ವಿದೇಶ

ಭಾರತದ ವಿರುದ್ಧ ಮಾತನಾಡಬೇಡಿ: ಪಾಕ್ ಸಚಿವರು, ಅಧಿಕಾರಿಗಳಿಗೆ ನವಾಜ್ ಷರೀಫ್ ಸೂಚನೆ

ಭಾರತ ವಿರೋಧಿ ಹೇಳಿಕೆಗಳನ್ನು ನೀಡದಂತೆ ಪಾಕ್ ಪ್ರಧಾನಿ ನವಾಜ್ ಷರೀಫ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತಾಕೀತು ಮಾಡಿದ್ದಾರೆ.

ಭಾರತದ ವಿರುದ್ಧ ಮಾತನಾಡಬೇಡಿ: ಪಾಕ್ ಸಚಿವರು, ಅಧಿಕಾರಿಗಳಿಗೆ ನವಾಜ್ ಷರೀಫ್ ಸೂಚನೆ
ನವಾಜ್ ಷರೀಫ್-ನರೇಂದ್ರ ಮೋದಿ (ಸಂಗ್ರಹ ಚಿತ್ರ)
Published On :

ಇಸ್ಲಾಮಾಬಾದ್: ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿದ್ದು, ಭಾರತ ವಿರೋಧಿ ಹೇಳಿಕೆಗಳನ್ನು ನೀಡದಂತೆ ಪಾಕ್ ಪ್ರಧಾನಿ ನವಾಜ್ ಷರೀಫ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತಾಕೀತು ಮಾಡಿದ್ದಾರೆ.
ನವಾಜ್ ಷರೀಫ್ ಎಚ್ಚರಿಕೆ ನೀದಿರುವುದರ ಪಾಕ್ ದೈನಿಕ ದಿ ನೇಷನ್ ವರದಿ ಪ್ರಕಟಿಸಿದ್ದು, ದ್ವಿಪಕ್ಷೀಯ ಸಂಬಂಧ ಈಗಷ್ಟೇ ಒಂದು ಹಂತಕ್ಕೆ ಬರುತ್ತಿದ್ದು, ಸೌಹಾರ್ದತೆಗೆ ಧಕ್ಕೆಯಾಗುವಂತೆ ಭಾರತದ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು ಎಂದು ಷರೀಫ್ ಪಾಕ್ ನ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳುವುದಕ್ಕೆ ಪೂರಕವಾಗಿರುವ ವಿಷಯಗಳ ಬಗ್ಗೆ ಮಾತ್ರ ಹೇಳಿಕೆ ನೀಡಿ, ಹಿಂದಿನ ವಿಷಯಗಳನ್ನು ಮತ್ತೆ ಪ್ರಸ್ತಾಪಿಸಬೇಡಿ ಎಂದು ಷರೀಫ್ ಸೂಚನೆ ನೀಡಿರುವುದನ್ನು ದಿ ನೇಷನ್ ಪತ್ರಿಕೆ ಉಲ್ಲೇಖಿಸಿದೆ. ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳುವುದರ ಬಗ್ಗೆ ಅಶಾವಾದಿಯಾಗಿರುವುದಾಗಿ ನವಾಜ್ ಷರೀಫ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ನಡೆದ ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ವೇಳೆ ವ್ಯಾಪಾರ- ವಹಿವಾಟು, ಭಯೋತ್ಪಾದನೆ ನಿಗ್ರಹದ ವಿಷಯ ಚರ್ಚಿಸಿದಾಗ ಕಾಶ್ಮೀರ ವಿವಾದದ ಬಗ್ಗೆ ಪ್ರಸ್ತಾಪಿಸಲು ಷರೀಫ್ ಉತ್ಸುಕರಾಗಿದ್ದರು ಎಂದು ಪಾಕ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.