ಇಂಡೋನೇಷ್ಯಾ ದೋಣಿ ದುರಂತದಲ್ಲಿ ಮಕ್ಕಳಿಬ್ಬರ ಸಾವು: ವರದಿ
ಕಡಲ ತೀರದ ಸಮೀಪ ದೋಣಿಯೊಂದು ಮುಳುಗಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ಘಟನೆ ಇಂಡೋನೇಷ್ಯಾದಲ್ಲಿ ಇಂದು ನಡೆದಿದೆ...

ಜಕಾರ್ತ: ಇಂಡೋನೇಷ್ಯಾದ ಕಡಲ ತೀರದ ಸಮೀಪ ದೋಣಿಯೊಂದು ಮುಳುಗಿದೆ. ಈ ದುರಂತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಇಂಡೋನೇಷ್ಯಾದ ಸುಲಾಬಸ್ಸೀ ಕಡಲ ತೀರಕ್ಕೆ ಬರುವ ಸಂದರ್ಭದಲ್ಲಿ ಬೃಹತ್ ಅಲೆಗಳು ಎದುರಾದ ಪರಿಣಾಮ ದೋಣಿ ಪಲ್ಟಿಯಾಗಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ದೋಣಿಯಲ್ಲಿದ್ದವರ ಪೈಕಿ ಕರಾವಳಿ ಪಡೆ 20ಕ್ಕೂ ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ರಕ್ಷಿಸಿದೆ. ಸುಮಾರು ನಾಲ್ಕೈದು ಮೀಟರ್ ಎತ್ತರದ ಅಲೆಗಳು ಸಮುದ್ರದಲ್ಲಿ ಎದ್ದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಕರಾವಳಿ ಪಡೆ ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾಗಿರುವ ಪ್ರಯಾಣಿಕರಿಗಾಗಿ ರಕ್ಷಣಾ ಕಾರ್ಯ ಮುಂದುವರೆದಿದೆ. ದೋಣಿಯಲ್ಲಿದ್ದವರ ಪೈಕಿ ಬಹುತೇಕ ಜನ ಸಿರಿಯಾ, ಇರಾಕ್ ಮತ್ತು ಪಾಕಿಸ್ಥಾನದಿಂದ ಬಂದಿದ್ದ ನಿರಾಶ್ರಿತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


