ರಷ್ಯಾ ಜತೆ ಬಾಂಧವ್ಯ ಮತ್ತಷ್ಟು ವೃದ್ಧಿ
ಪ್ರಧಾನಿ ನರೇಂದ್ರ ಮೋದಿ 2 ದಿನಗಳ ರಷ್ಯಾ ಪ್ರವಾಸ ಬುಧವಾರ ಆರಂಭವಾಗಿದೆ. ಮಾಸ್ಕೋದಲ್ಲಿ 16ನೇ ಭಾರತ-ರಷ್ಯಾ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2 ದಿನಗಳ ರಷ್ಯಾ ಪ್ರವಾಸ ಬುಧವಾರ ಆರಂಭವಾಗಿದೆ. ಮಾಸ್ಕೋದಲ್ಲಿ 16ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನದಲ್ಲಿ ಅವರು ಭಾಗವಹಿಸಲಿದ್ದಾರೆ.
ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ, ಇಂಧನ ಹಾಗೂ ರಕ್ಷಣಾ ವಲಯದ ದ್ವಿಪಕ್ಷೀಯ ಸಹಕಾರವನ್ನು ಈ ಭೇಟಿ ಇನ್ನಷ್ಟು ಗಟ್ಟಿಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಅದರಲ್ಲೂ ರಕ್ಷಣೆ, ಅಣು ವಿದ್ಯುತ್, ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಮಹತ್ವದ ಮಾತುಕತೆಯ ನಿರೀಕ್ಷೆ ಇದೆ.
ಇದನ್ನು ಬಹುನಿರೀಕ್ಷೆಯ ಮಾತುಕತೆಗಳ ಭೇಟಿ ಎಂದಿರುವ ಮೋದಿ, ಭಾರತದ ಅತ್ಯಂತ ವಿಶ್ವಾಸಾರ್ಹ, ಗೌರವಾನ್ವಿತ ಮಿತ್ರನಾದ ರಷ್ಯಾದೊಂದಿಗಿನ ಮಾತುಕತೆಗಳು ದ್ವಿಪಕ್ಷೀಯ ಬಾಂಧವ್ಯ ಹಾಗೂ ಸಹಕಾರಕ್ಕೆ ಹೊಸ ಭಾಷ್ಯ ಬರೆಯುವ ನಿರೀಕ್ಷೆ ಇದೆ ಎಂದಿದ್ದಾರೆ. ಜತೆಗೆ, ತಮ್ಮ ಹಾಗೂ ರಷ್ಯಾ ಅಧ್ಯಕ್ಷ ಪುಟಿನ್‍ರ ರಾಜಕೀಯ ಬೆಳವಣಿಗೆ ಒಂದೇ ಬಗೆಯದು ಎಂದೂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


