ದಕ್ಷಿಣ ಆಫ್ರಿಕಾದಲ್ಲಿ ಮೂವರು ಮಹಿಳೆಯರಿಂದ ಪುರುಷನ ಮೇಲೆ ಅತ್ಯಾಚಾರ
ಮೂವರು ಮಹಿಳೆಯರು ಪುರುಷನನ್ನು ಅಪಹರಿಸಿ, ಅತ್ಯಾಚಾರಗೈದು ಆತನ ವೀರ್ಯವನ್ನು ಸಂಗ್ರಹಿಸಿರುವ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದು ಅಲ್ಲಿನ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮೂವರು ಮಹಿಳೆಯರು ಪುರುಷನನ್ನು ಅಪಹರಿಸಿ, ಅತ್ಯಾಚಾರಗೈದು ಆತನ ವೀರ್ಯವನ್ನು ಸಂಗ್ರಹಿಸಿರುವ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದು ಅಲ್ಲಿನ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕ್ವಾಜಾಖೆಲೆ ಟೌನ್ ಶಿಪ್ ಬಳಿ 33 ವರ್ಷದ ವ್ಯಕ್ತಿಯೊಬ್ಬನನ್ನು ಬಿಎಂಡ್ಬ್ಲ್ಯೂ ಕಾರಿನಲ್ಲಿ ಅಪಹರಿಸಿದ ಅನಾಮಿಕ ಮೂವರು ಮಹಿಳೆಯರು, ಆ ವ್ಯಕ್ತಿಗೆ ಮತ್ತು ಬರುವ ವಸ್ತು ನೀಡಿ ಅತ್ಯಾಚಾರವೆಸಗಿದ್ದಾರೆ ಅಷ್ಟೇ ಅಲ್ಲದೇ ಆತನ ವೀರ್ಯವನ್ನು ಕೂಲರ್ ಬಾಕ್ಸ್ ನಲ್ಲಿ ಸಂಗ್ರಹಿಸಿದ್ದಾರೆ.
ಘಟನೆ ನಡೆದ ಬಳಿಕ ಆತನನ್ನು ಕಾರಿನಿಂದ ಹೊರ ಹಾಕಿದ್ದಾರೆ ಎಂದು ಮೇಲ್ ಆನ್ ಲೈನ್ ವರದಿ ಮೂಲಕ ತಿಳಿದುಬಂದಿದೆ. ಈ ರೀತಿಯ ಘಟನೆ ಹಿಂದೆಂದೂ ನಡೆದಿರಲಿಲ್ಲ, ಅತ್ಯಾಚಾರ ಘಟನೆಯಿಂದ ಸಂತ್ರಸ್ತ ವ್ಯಕ್ತಿ ಆಘಾತಕ್ಕೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


