ಕಾಬೂಲ್ ವಿಮಾನ ನಿಲ್ದಾಣ ಬಳಿ ಬಾಂಬ್ ಸ್ಫೋಟ; ಓರ್ವ ಸಾವು, ನಾಲ್ವರಿಗೆ ಗಾಯ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸೋಮವಾರ ಬೆಳಗ್ಗೆ ಕಾರ್ ಬಾಂಬ್ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ....

Published On :
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸೋಮವಾರ ಬೆಳಗ್ಗೆ ಕಾರ್ ಬಾಂಬ್ ಸ್ಫೋಟಗೊಂಡಿರುವ ಘಟನೆ ವರದಿಯಾಗಿದೆ.
ಕಾಬೂಲ್‌ನ ಹಮೀದ್ ಕರ್ಜೈ ವಿಮಾನ ನಿಲ್ದಾಣದ ಬಳಿ ಕಾರು ಬಾಂಬ್ ಸ್ಫೋಟ ನಡೆದಿದ್ದು, ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು, ನಾಲ್ಪರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಕಾಬೂಲ್ ನ ವಿಮಾನ ನಿಲ್ದಾಣದ ಬಳಿ ಕಾರು ನಿಲ್ಲಿಸಿ ಈ ಬಾಂಬ್ ಸ್ಫೋಟ ಮಾಡಲಾಗಿದೆ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.
ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆ ಈ ಕೃತ್ಯದ ಹೊಣೆ ಹೊತ್ತಿಲ್ಲ. ಆದರೆ ತಾಲೀಬಾನ್ ನುಸುಳುಕೋರರದ್ದೇ ಈ ಕೃತ್ಯ ಎಂದು ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಕಾಬೂಲ್‌ನ ಹೆಚ್ಚುವರಿ ಪೊಲೀಸ್ ವರಿಷ್ಠ ಗುಲ್ ಅಘಾ ರೊಹಾನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಾಂಬ್ ಸ್ಫೋಟAfghanistanbomb Blastಕಾಬೂಲ್ಅಫ್ಘಾನಿಸ್ತಾನKabul airportHamid Karzai airportಹಮೀದ್ ಕರ್ಜೈ ವಿಮಾನ ನಿಲ್ದಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


