ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಸಾವು, 25 ಮಂದಿಗೆ ಗಾಯ
ಪಾಕಿಸ್ತಾನದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಮಂಗಳವಾರ ಸರ್ಕಾರಿ ಕಚೇರಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು,...

Published On :
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಮಂಗಳವಾರ ಸರ್ಕಾರಿ ಕಚೇರಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ 18 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಯುವ್ಯ ಪಾಕಿಸ್ತಾನದಲ್ಲಿ ಮರ್ದಾನ್ ಬಳಿಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ರಾಷ್ಟ್ರೀಯ ದತ್ತಾಂಶ ಮತ್ತು ನೋಂದಣಿ ಪ್ರಾಧಿಕಾರದ ಕಚೇರಿ ಎದುರು ಉಗ್ರರು ಇಂದು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ಸ್ಫೋಟದ ತೀವ್ರತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ.
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹಾಗೂ ಆಂತರಿಕ ಸಚಿವ ಚೌಧರಿ ನಿಸಾರ್ ಅಲಿಖಾನ್ ಅವರು ಅವರು ಈ ದಾಳಿಯನ್ನು ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಆದರೆ ಇದುವರೆಗೆ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


