ವಿದೇಶ

ಮೋದಿ, ಷರೀಫ್‌ರನ್ನು ವಾಷಿಂಗ್‌ಟನ್‌ಗೆ ಆಹ್ವಾನಿಸಿದ ಒಬಾಮ

ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ದಿಢೀರ್ ಭೇಟಿ ನೀಡಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು, ಮೋದಿ ಹಾಗೂ ಪಾಕ್ ಪ್ರಧಾನಿ...

ಮೋದಿ, ಷರೀಫ್‌ರನ್ನು ವಾಷಿಂಗ್‌ಟನ್‌ಗೆ ಆಹ್ವಾನಿಸಿದ ಒಬಾಮ
ಬರಾಕ್ ಒಬಾಮ - ನರೇಂದ್ರ ಮೋದಿ
Published On :
ಕರಾಚಿ: ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ದಿಢೀರ್ ಭೇಟಿ ನೀಡಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು, ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರನ್ನು ವಾಷಿಂಗ್‌ಟನ್‌ಗೆ ಆಹ್ವಾನಿಸಿದ್ದಾರೆ.
ಮುಂದಿನ ವರ್ಷ ಮಾರ್ಚ್ 31ರಿಂದ ಏಪ್ರಿಲ್ 1ರವರೆಗೆ ನಡೆಯುವ ಪರಮಾಣು ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸುವಂತೆ ಉಭಯ ದೇಶಗಳ ನಾಯಕರಿಗೆ ಅಮೆರಿಕ ಅಧ್ಯಕ್ಷರು ಆಹ್ವಾನ ನೀಡಿದ್ದಾರೆ. ಆದರೆ ಈ ಆಹ್ವಾನದ ಕುರಿತು ಅಮೆರಿಕ ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ ಎಂದು ಎಕ್ಸ್‌ಪ್ರೆಸ್ ಟ್ರಿಬುನ್ ವರದಿ ಮಾಡಿದೆ.
2016ರ ಪರಮಾಣು ಭದ್ರತಾ ಸಮ್ಮೇಳನ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ವೇದಿಕೆ ಕಲ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
2014ರಲ್ಲಿ ಒಬಾಮ ನೇತೃತ್ವದಲ್ಲೇ 4ನೇ ಪರಮಾಣು ಭದ್ರತಾ ಸಮ್ಮೇಳನ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.