ಇಸ್ಲಾಮಾಬಾದಿನಲ್ಲಿ ಭೂಕಂಪನ; ಕನಿಷ್ಠ ಮೂರು ಸಾವು
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದಿನಲ್ಲಿ ಸಂಭವಿಸಿದ ರಿಕ್ಟರ್ ಮಾಪನದಲ್ಲಿ ೫.೫ ತೀವ್ರತೆಯ ಭೂಕಂಪನದಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ಕನಿಷ್ಠ

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದಿನಲ್ಲಿ ಸಂಭವಿಸಿದ ರಿಕ್ಟರ್ ಮಾಪನದಲ್ಲಿ ೫.೫ ತೀವ್ರತೆಯ ಭೂಕಂಪನದಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಖೈಬರ್ ಪಖ್ತುಂಖ್ವ ಪ್ರಾಂತ್ಯದಲ್ಲೂ ಶನಿವಾರ ಬೆಳಗ್ಗೆ ಭೂಕಂಪನವಾದ ವರದಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಸ್ಲಾಮಾಬಾದ್ ನಿಂದ ೧೧೦ ಕಿಮೀ ದೂರದಲ್ಲಿರುವ ಅಬ್ಬೋತ್ತಾಬಾದ್ ನಲ್ಲಿ ಭೂಮಿ ನಲುಗಿದ್ದಕ್ಕೆ ಕಟ್ಟಡವೊಂದು ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕಂಪನಗಳು ಜನರಲ್ಲಿ ಭೀತಿಯನ್ನು ಸೃಷ್ಟಿಸಿದ್ದು ತಮ್ಮ ಮನೆಗಳಿಂದ ಹೊರಗೆ ಓಡಿಬಂದದ್ದು ವರದಿಯಾಗಿದೆ. ಈ ಭೂಕಂಪನ ಮಧ್ಯರಾತ್ರಿ ಸುಮಾರು ೧:೫೯ ಘಂಟೆಗೆ ಸಂಭವಿಸಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


