ಜೆಟ್ ವಿಮಾನ ಪತನ, ಲಾಡೆನ್ ಸಂಬಂಧಿಗಳು ಸಜೀವ ದಹನ
ದಕ್ಷಿಣ ಇಂಗ್ಲೆಂಡ್‌ನಲ್ಲಿ ಶುಕ್ರವಾರ ಖಾಸಗಿ ಜೆಟ್ ವಿಮಾನ ಪತನಗೊಂಡ ಪರಿಣಾಮ ಒಸಮಾ ಬಿನ್ ಲಾಡೆನ್‌ನ ನಾಲ್ವರು ಸಂಬಂಧಿಗಳು ಸಜೀವ ದಹನವಾಗಿದ್ದಾರೆ...

ಲಂಡನ್: ದಕ್ಷಿಣ ಇಂಗ್ಲೆಂಡ್‌ನಲ್ಲಿ ಶುಕ್ರವಾರ ಖಾಸಗಿ ಜೆಟ್ ವಿಮಾನ ಪತನಗೊಂಡ ಪರಿಣಾಮ ಒಸಮಾ ಬಿನ್ ಲಾಡೆನ್‌ನ ನಾಲ್ವರು ಸಂಬಂಧಿಗಳು ಸಜೀವ ದಹನವಾಗಿದ್ದಾರೆ ಎಂದು ಸೌದಿ ಮತ್ತು ಬ್ರಿಟಿಷ್ ಮಾಧ್ಯಮಗಳು ವರದಿ ಮಾಡಿವೆ.
ಅಪಘಾತದಲ್ಲಿ ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಯಾರೂ ಕೂಡ ಬದುಕುಳಿದಿಲ್ಲ. ಸ್ಫೋಟದ ತೀವ್ರತೆಗೆ ಪ್ರಯಾಣಿಕರ ದೇಹಗಳು ಗುರುತು ಸಿಗಲಾರದಷ್ಟು ಛಿತ್ರವಾಗಿವೆ ಬ್ರಿಟಿಷ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಬ್ರಿಟನ್‌ನಲ್ಲಿರುವ ಸೌದಿ ಅರೇಬಿಯಾದ ರಾಯಭಾರಿ ಕಚೇರಿ ಇದನ್ನು ಖಚಿತಪಡಿಸಿಲ್ಲ. ಆದರೆ ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ದೊರೆ ಮೊಹಮ್ಮದ್ ಬಿನ್ ನವಾಫ್ ಬಿನ್ ಅಲ್‌ಸೌದ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಸೌದಿ ಅರೇಬಿಯಾದಲ್ಲಿ ವಾಸ ಮಾಡುತ್ತಿದ್ದ ಲಾಡೆನ್ ಸಂಬಂಧಿಗಳು ಬ್ರಿಟನ್‌ನಲ್ಲಿ ವಾಣಿಜ್ಯ ವಹಿವಾಟು ನಡೆಸಲು ತೆರಳಿದ್ದರು ಎಂದು ತಿಳಿದು ಬಂದಿದೆ. ಪುನಃ ಸೌದಿಗೆ ಹೊರಟ ವೇಳೆ ಜೆಟ್ ವಿಮಾನ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಅವರ ಪೂರ್ಣ ವಿವರಗಳು ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ವಿಮಾನಯಾನ ಸಿಬ್ಬಂದಿ ತಿಳಿಸಿದ್ದಾರೆ.
ಸೌದಿ ಅರೇಬಿಯಾದ ಮಾಧ್ಯಮಗಳು ಕೂಡ ಇದನ್ನು ಖಚಿತಪಡಿಸಿವೆ. ಆದರೆ ಅವರ ಹೆಸರುಗಳು ಮತ್ತು ಪೂರ್ಣ ವಿವರಗಳನ್ನು ಬಹಿರಂಗಪಡಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


