ಮೋದಿಗೆ ಪಾಕಿಸ್ತಾನ ಮತ್ತು ಮುಸ್ಲಿಮರ ಜೊತೆ ಸಮಸ್ಯೆ ಇದೆ: ಮುಷರಫ್
ರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾಕಿಸ್ತಾನ ಮತ್ತು ಮುಸ್ಲಿಮರ ಜೊತೆ ಸಮಸ್ಯೆಗಳನ್ನು ಹೊಂದಿದ್ದಾರೆ ಎಂದು ಪಾಕಿಸ್ತಾನ ಮಾಜಿ ಅಧ್ಯಕ್ಷ ಫರ್ವೇಜ್...

ಲಾಹೋರ್: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾಕಿಸ್ತಾನ ಮತ್ತು ಮುಸ್ಲಿಮರ ಜೊತೆ ಸಮಸ್ಯೆಗಳನ್ನು ಹೊಂದಿದ್ದಾರೆ ಎಂದು ಪಾಕಿಸ್ತಾನ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಹೇಳಿದ್ದಾರೆ,
ಸದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಸೈದ್ದಾಂತಿಕ ಸಂಘರ್ಷ ನಡೆಯುತ್ತಿಲ್ಲ, ಎರಡು ದೇಶದಲ್ಲಿ ಆಡಳಿತಾರೂಢ ನಾಯಕರುಗಳ ವಯಕ್ತಿಕ ಕಾರಣಗಳಿಂದ ಸಂಘರ್ಷ ನಡೆಯುತ್ತಿದೆ ಎಂದು ಪಾಕಿಸ್ತಾನದ ಟಿವಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಾವು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಅಧಿಕಾರದಲ್ಲಿದ್ದಾಗ ಆ ನಾಯಕರುಗಳ ಜೊತೆ. ಚರ್ಚಿಸಿದ್ದೇವೆ, ಆದರೆ ಭಾರತದಲ್ಲಿ ಈ ಹೊಸ ಪ್ರಧಾನ ಮಂತ್ರಿ ಅಧಿಕಾರಕ್ಕೆ ಬಂದ ನಂತರ ವಯಕ್ತಿಕ ಸಂಘರ್ಷ ಹೆಚ್ಚಾಗಿದೆ. ಪಾಕಿಸ್ತಾನ ಮತ್ತು ಮುಸ್ಲಿಮರ ಜೊತೆ ಅವರು ಹೆಚ್ಚು ದ್ವೇಷ ಹೊಂದಿದ್ದಾರೆ, ಇದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಮುಶ್ರಫ್ ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ನ್ಯಾಯಯುತವಾಗಿ ಪ್ರಯತ್ನಿಸಿದ್ದರು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


