ವಿದೇಶ

ಸುಡಾನ್ ವಿಮಾನ ಪತನ: 40 ಸಾವು

ದಕ್ಷಿಣ ಸುಡಾನ್ ರಾಜಧಾನಿ ಜುಬಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸರಕು ವಿಮಾನವೊಂದು ಪತನಗೊಂಡಿದ್ದು, ಪರಿಣಾಮ 40 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ ಎಂದು ವರದಿಗಳು ತಿಳಿಸಿವೆ...

ಸುಡಾನ್ ವಿಮಾನ ಪತನ: 40 ಸಾವು
ವಿಮಾನ ಪತನಗೊಂಡಿರುವ ಸ್ಥಳದಲ್ಲಿ ನೆರೆದಿರುವ ಜನರು (ಫೋಟೋ ಕೃಪೆ: ಎಎಫ್ ಪಿ)
Published On :

ಜುಬಾ: ದಕ್ಷಿಣ ಸುಡಾನ್ ರಾಜಧಾನಿ ಜುಬಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸರಕು ವಿಮಾನವೊಂದು ಪತನಗೊಂಡಿದ್ದು, ಪರಿಣಾಮ 40 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ ಎಂದು ವರದಿಗಳು ತಿಳಿಸಿವೆ.

ನೈಲ್ ನದಿಯ ಉತ್ತರ ಭಾಗದ ಪಲೋಚ್ ಗೆ ತೆರಳುತ್ತಿದ್ದ ಈ ಕಾರ್ಗೋ ವಿಮಾನವು ಜುಬಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 800 ಮೀ. ಎತ್ತರಕ್ಕೆ ಹಾರಾಟ ನಡೆಸಿತ್ತು. ಈ ವೇಳೆ ಇದ್ದಕ್ಕಿದ್ದಂತೆ ನೆಲಕ್ಕೆ ಅಪ್ಪಳಿಸಿದ ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ವಿಮಾನದಲ್ಲಿ ಎಷ್ಟು ಮಂದಿಯಿದ್ದರೆಂಬುದು ಈ ವರೆಗೂ ತಿಳಿದುಬಂದಿಲ್ಲ. ಆದರೆ, ವಿಮಾನ ಪತನಗೊಂಡ ಸ್ಥಳದಲ್ಲಿ 40 ಮಂದಿಯ ಶವಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.