ಭಾರತದಲ್ಲಿ ಆಂತರಿಕ ಯುದ್ಧ ಎದುರಾಗಿದೆ: ಪಾಕ್ ದಿನಪತ್ರಿಕೆ ಸಂಪಾದಕೀಯ
ಅಸಷ್ಣುತೆಯನ್ನು ವಿರೋಧಿಸಿ ಸಾಹಿತಿಗಳು ಪ್ರಶಸ್ತಿ ವಾಪಸ್ ನೀಡುತ್ತಿರುವುದರ ಬಗ್ಗೆ ಪಾಕಿಸ್ತಾನ ಪತ್ರಿಕೆ ವರದಿ ಮಾಡಿದ್ದು, ಭಾರತದಲ್ಲಿ ಆಂತರಿಕ ಯುದ್ಧ ಪ್ರಾರಂಭವಾಗಿದೆ ಎಂದು ಬರೆದಿದೆ.

ಇಸ್ಲಾಮಾಬಾದ್: ಅಸಷ್ಣುತೆಯನ್ನು ವಿರೋಧಿಸಿ ಸಾಹಿತಿಗಳು ಪ್ರಶಸ್ತಿ ವಾಪಸ್ ನೀಡುತ್ತಿರುವುದರ ಬಗ್ಗೆ ಪಾಕಿಸ್ತಾನ ಪತ್ರಿಕೆ ಸಂಪಾದಕೀಯ ಪ್ರಕಟಿಸಿದ್ದು, ಭಾರತದಲ್ಲಿ ಆಂತರಿಕ ಯುದ್ಧ ಪ್ರಾರಂಭವಾಗಿದೆ ಎಂದು ಬರೆದಿದೆ.
ದ್ವೇಷದ ವಾತಾವರಣ ಎಂಬ ಸಂಪಾದಕೀಯ ಬರೆದಿರುವ ಡಾನ್ ಪತ್ರಿಕೆ, ಭಾರತದಲ್ಲಿ ದ್ವೇಷದ ವಾತಾವರಣ ನಿರ್ಮಾಣವಾಗಿರುವುದು ಅಪಾಯಕಾರಿಯಾಗಿದೆ ಎಂದು ಅಭಿಪ್ರಾಯಾಟ್ಟಿದೆ. ಭಾರತ-ಪಾಕಿಸ್ತಾನ ನಡುವೆ ಭಿನ್ನಾಭಿಪ್ರಾಯ ವಿರುವ ಸಂದರ್ಭದಲ್ಲಿ ಭಾರತ ತನ್ನಲ್ಲೇ ಆಂತರಿಕ ಯುದ್ಧ ಎದುರಿಸುತ್ತಿರುವಂತೆ ತೋರುತ್ತದೆ. ಭಾರತದಲ್ಲಿ ಉಂಟಾಗಿರುವ ಅಸಹಿಷ್ಣುತೆ ದಕ್ಷಿಣ ಏಷ್ಯಾದಲ್ಲಿ ಶಾಂತಿ ಅಥವಾ ಸ್ಥಿರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಡಾನ್ ಅಭಿಪ್ರಾಯಪಟ್ಟಿದೆ.
ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸಾಹಿತಿಗಳು ಹೆಚ್ಚುತ್ತಿರುವ ಅಸಹಿಷ್ಣುತೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಭಾರತದ ಪ್ರತಿಷ್ಠಿತ ಸಂಸ್ಥೆಗಳು ನೀಡಿದ್ದ ಪ್ರಶಸ್ತಿಯನ್ನು ವಾಪಸ್ ನೀಡಲು ಪ್ರಾರಂಭಿಸಿದ್ದಾರೆ. ಪಾಕಿಸ್ತಾನದಲ್ಲಿ ಧಾರ್ಮಿಕ ಹಿಂಸಾಚಾರದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ, ತಮ್ಮ ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ಖಂಡಿಸಿಲ್ಲ. ದೇಶದ ಸಮಸ್ತ ಪ್ರಜೆಗಳಿಗೆ ನಾಯಕನಾಗಿರುವ ಭರವಸೆಯನ್ನು ಉಳಿಸಿಕೊಳ್ಳಲು ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಡಾನ್ ಸಂಪಾದಕೀಯ ಬರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


