ಭಾರತಕ್ಕೆ ಬಂಡುಕೋರ ಅನೂಪ್ ಚೇತಿಯಾನನ್ನು ಹಸ್ತಾಂತರಿಸಿದ ಬಾಂಗ್ಲಾ
ನಕಲಿ ಪಾಸ್ ಪೋರ್ಟ್ ಬಳಸಿ ದೇಶವನ್ನು ಪ್ರವೇಶಿಸಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಅಸ್ಸಾಂನ ಬಂಡುಕೋರ ಉಲ್ಫಾ ಸಂಘಟನೆಯ ಮುಖ್ಯಸ್ಥನನ್ನು ಭಾರತಕ್ಕೆ ಹಸ್ತಾಂತರಿಸಲು...

Published On :
ಢಾಕಾ: ನಕಲಿ ಪಾಸ್ ಪೋರ್ಟ್ ಬಳಸಿ ದೇಶವನ್ನು ಪ್ರವೇಶಿಸಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಅಸ್ಸಾಂನ ಬಂಡುಕೋರ ಉಲ್ಫಾ ಸಂಘಟನೆಯ ಮುಖ್ಯಸ್ಥನನ್ನು ಭಾರತಕ್ಕೆ ಹಸ್ತಾಂತರಿಸಲು ಬಾಂಗ್ಲಾದೇಶ ಸಮ್ಮತಿ ಸೂಚಿಸಿದೆ.
ಅನೂಪ್ ಚೇತಿಯಾ ವಿರುದ್ಧ ಅಸ್ಸಾಂನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕಳೆದ 17 ವರ್ಷಗಳಿಂದ ಭಾರತಕ್ಕೆ ಅನೂಪ್ ಚೇತಿಯಾ ಬೇಕಾಗಿದ್ದ. ಹೀಗಾಗಿ ಅನೂಪ್ ಚೇತಿಯಾ ಹಸ್ತಾಂತರಕ್ಕೆ ಭಾರತ ಸರ್ಕಾರ ಬಾಂಗ್ಲಾದೇಶಕ್ಕೆ ಮನವಿ ಮಾಡಿತ್ತು.
ಈ ಸಂಬಂಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಬಾಂಗ್ಲಾದೇಶ ಅಧಿಕಾರಿಗಳೊಂದಿಗೆ ಹಲವು ಬಾರಿ ಚರ್ಚೆ ನಡೆಸಿದ್ದರು. ಈ ಮಧ್ಯೆ ಪ್ರಧಾನಿ ಮೋದಿ ಅವರ ಮಧ್ಯಪ್ರವೇಶದಿಂದಾಗಿ ಚೇತಿಯಾನನ್ನು ಭಾರತಕ್ಕೆ ಹಸ್ತಾಂತರಿಸಲು ಬಾಂಗ್ಲಾ ಸಮ್ಮತಿಸಿತ್ತು.
ಢಾಕಾದಲ್ಲಿ ಸಿಬಿಐ ತಂಡ ಅನೂಪ್ ಚೇತಿಯಾನನ್ನು ವಶಕ್ಕೆ ಪಡೆದಿದ್ದು, ಇಂದು ದೆಹಲಿಗೆ ಕರೆತರೋ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


