ವಿದೇಶ

ಭಾರತದಲ್ಲಿ ಕ್ರಿಕೆಟ್ ಆಡುವ ಪ್ರಶ್ನೆಯೇ ಇಲ್ಲ: ಪಿಸಿಬಿ ಮುಖ್ಯಸ್ಥ ಶರ್ಯಾರ್ ಖಾನ್

ಭಾರತ-ಪಾಕ್ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡುವ ಪ್ರಶ್ನೆಯೇ ಇಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶರ್ಯಾರ್ ಖಾನ್ ಸ್ಪಷ್ಟ ಪಡಿಸಿದ್ದಾರೆ. ...

ಭಾರತದಲ್ಲಿ ಕ್ರಿಕೆಟ್ ಆಡುವ ಪ್ರಶ್ನೆಯೇ ಇಲ್ಲ: ಪಿಸಿಬಿ ಮುಖ್ಯಸ್ಥ ಶರ್ಯಾರ್ ಖಾನ್
ಶರ್ಯಾರ್ ಖಾನ್
Published On :

ಲಾಹೋರ್ : ಭಾರತ-ಪಾಕ್ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡುವ ಪ್ರಶ್ನೆಯೇ ಇಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶರ್ಯಾರ್ ಖಾನ್ ಸ್ಪಷ್ಟ ಪಡಿಸಿದ್ದಾರೆ.

ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಭಾರತ-ಪಾಕ್ ಕ್ರಿಕೆಟ್ ಸರಣಿಯನ್ನು ಡಿಸೆಂಬರ್ ನಲ್ಲಿ ಆಯೋಜಿಸಲು ಪಾಕಿಸ್ತಾನಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಶರ್ಯಾರ್ ಖಾನ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ- ಪಾಕ್ ಸರಣಿಯನ್ನು ಯುಎಇಯಲ್ಲಿ ಆಡುವುದಾದರೇ ಮಾತ್ರ ತಾನು ಭಾಗವಹಿಸುವುದಾಗಿ ಪಿಸಿಬಿ ತಿಳಿಸಿದೆ. ಪಾಕಿಸ್ತಾನದ ಜೊತೆಗೆ ಯುಎಇಯಲ್ಲಿ ಕ್ರಿಕೆಟ್ ಆಡಲು ಭಾರತ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಈ ಹಿಂದೆ ಹೇಳಿದ್ದರು.

ಆದರೆ, ಯಾವುದೇ ಕಾರಣಕ್ಕೂ ಭಾರತದಲ್ಲಿ ಪಾಕಿಸ್ತಾನ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಕಡ್ಡಿ ತುಂಡು ಮಾಡುವಂತೆ ಹೇಳಿರುವ ಪಿಸಿಬಿ, ಯುಎಇಯಲ್ಲಿ ಭಾರತ ಆಡದಿರಲು ಏನು ಕಾರಣ ಎಂಬುದನ್ನು ಸ್ಪಷ್ಟಪಡಿಸುವಂತೆ ಪಿಸಿಬಿ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.