ಭಾರತದ 13 ಯೋಧರನ್ನು ಬಿಡುಗಡೆ ಮಾಡಿದ ನೇಪಾಳ
ಭಾರತದ ಸೀಮಾ ಸಶಸ್ತ್ರ ಬಲದ (ಎಸ್ಎಸ್ಬಿ) 13 ಯೋಧರನ್ನು ನೇಪಾಳ ಬಿಡುಗಡೆ ಮಾಡಿದ್ದಾರೆ...

Published On :
ಕಾಠ್ಮಂಡು: ಭಾರತದ ಸೀಮಾ ಸಶಸ್ತ್ರ ಬಲದ (ಎಸ್ಎಸ್ಬಿ) 13 ಯೋಧರನ್ನು ನೇಪಾಳ ಬಿಡುಗಡೆ ಮಾಡಿದ್ದಾರೆ.
ಭಾರತ-ನೇಪಾಳ ಗಡಿಯಲ್ಲಿ ಡಿಸೆಲ್ ಕಳ್ಳಸಾಗಾಣಿಕೆ ತಡೆಗಟ್ಟಲು ಪ್ರಯತ್ನಿಸುತ್ತಿದ್ದ ಭಾರತೀಯ ಯೋಧರು ನೇಪಾಳದ ಗ್ರಾಮವನ್ನು ಪ್ರವೇಶಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಹಿಡಿದಿದ್ದ ಗ್ರಾಮಸ್ಥರು ನೇಪಾಳದ ಪೊಲೀಸರ ವಶಕ್ಕೆ ಒಪ್ಪಿಸಿದ್ದರು.
ಭಾರತ-ನೇಪಾಳ ಗಡಿಯಲ್ಲಿರುವ ಕಿಶನ್ಗಂಜ್ ಜಿಲ್ಲೆಯಲ್ಲಿ ಡಿಸೆಲ್ ಕಳ್ಳಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಭಾನುವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ ಎಸ್ಎಸ್ಬಿ ಯೋಧರು ಕಳ್ಳಸಾಗಾಣಿಕೆ ತಂಡದವರನ್ನು ಬೆನ್ನಟ್ಟಿ ಹೋಗಿದ್ದರು. ಈ ಸಂದರ್ಭದಲ್ಲಿ ಅವರು ನೇಪಾಳ ಗಡಿಯನ್ನು ಪ್ರವೇಶಿಸಿದ್ದರು. ಇದನ್ನು ಕಂಡ ನೇಪಾಳದ ಗ್ರಾಮಸ್ಥರು ಯೋಧರನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


